ADVERTISEMENT

ಬಿಜೆಪಿಯೊಂದಿಗೆ ಮೈತ್ರಿ ಇಲ್ಲ: ಎಂ.ಪಿ. ನಾಡಗೌಡ

​ಪ್ರಜಾವಾಣಿ ವಾರ್ತೆ
Published 22 ಸೆಪ್ಟೆಂಬರ್ 2017, 20:37 IST
Last Updated 22 ಸೆಪ್ಟೆಂಬರ್ 2017, 20:37 IST

ಬೆಂಗಳೂರು: ‘ಪಕ್ಷದ ಕಾರ್ಯಕರ್ತರಿಗೆ ಬಿಜೆಪಿ ಜೊತೆಗೆ ಮೈತ್ರಿ ಮಾಡಿಕೊಳ್ಳುವುದು ಇಷ್ಟವಿಲ್ಲ. ಹಾಗಾಗಿ ಪಕ್ಷವನ್ನು ಸ್ವತಂತ್ರವಾಗಿ ಸಂಘಟಿಸುತ್ತೇವೆ’ ಎಂದು ಜೆಡಿ(ಯು) ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ಎಂ.ಪಿ.ನಾಡಗೌಡ ತಿಳಿಸಿದರು.

ಶುಕ್ರವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ದೇಶದಲ್ಲಿ ಬಿಜೆಪಿ ಆಡಳಿತದ ವಿರುದ್ಧ ಪರ್ಯಾಯ ರಾಜಕೀಯ ಶಕ್ತಿಯನ್ನು ಸಂಘಟಿಸುವ ಉದ್ದೇಶದಿಂದ ಬಿಹಾರದ ಜನತೆ ಅಧಿಕಾರ ನೀಡಿದ್ದರು. ಅದನ್ನು ದುರುಪಯೋಗಪಡಿಸಿಕೊಂಡ ನಿತೀಶ್ ಕುಮಾರ್ ಬಿಜೆಪಿ ಜೊತೆ ಮೈತ್ರಿ ಮಾಡಿಕೊಂಡಿರುವುದು ಖಂಡನಾರ್ಹ’ ಎಂದರು.

‘ಪಕ್ಷದ ರಾಷ್ಟ್ರೀಯ ಘಟಕದ ಹಂಗಾಮಿ ಅಧ್ಯಕ್ಷರನ್ನಾಗಿ ಚೋಟೂಬಾಯಿ ವಾಸವ ಅವರನ್ನು ಆಯ್ಕೆ ಮಾಡಲಾಗಿದೆ. 2018ರ ಮಾರ್ಚ್‌ ಒಳಗೆ ನೂತನ ಅಧ್ಯಕ್ಷರನ್ನು ಆಯ್ಕೆ ಮಾಡುತ್ತೇವೆ. ಅಕ್ಟೋಬರ್‌ 8ರಂದು ದೆಹಲಿಯಲ್ಲಿ ನಡೆಯುವ ರಾಷ್ಟ್ರೀಯ ಸಭೆಯಲ್ಲಿ ಪಕ್ಷವನ್ನು ಬಲಪಡಿಸುವ ಬಗ್ಗೆ ಚರ್ಚೆಗಳು ನಡೆಯಲಿವೆ’ ಎಂದು ತಿಳಿಸಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.