ADVERTISEMENT

ಬೆಂಗಳೂರು ವಿಶ್ವವಿದ್ಯಾಲಯ: ₹ 42 ಕೋಟಿ ಕೊರತೆ ಬಜೆಟ್

​ಪ್ರಜಾವಾಣಿ ವಾರ್ತೆ
Published 27 ಮಾರ್ಚ್ 2015, 19:50 IST
Last Updated 27 ಮಾರ್ಚ್ 2015, 19:50 IST

ಬೆಂಗಳೂರು: ಬೆಂಗಳೂರು ವಿಶ್ವವಿದ್ಯಾಲಯದ ₹ 2015–16ನೇ ಸಾಲಿನ ಶೈಕ್ಷಣಿಕ ವರ್ಷದ ₹ 42 ಕೋಟಿ ಕೊರತೆಯ ಬಜೆಟ್‌ಗೆ ಅಕಾಡೆಮಿಕ್‌ ಕೌನ್ಸಿಲ್‌ ಸಭೆಯಲ್ಲಿ ಶುಕ್ರವಾರ ಅನುಮೋದನೆ ನೀಡಲಾಯಿತು.

ಸುವರ್ಣ ಮಹೋತ್ಸವ ಭವನ ನಿರ್ಮಿಸುವುದು, ವಾಣಿಜ್ಯ ಕಟ್ಟಡದ ಕಾಮಗಾರಿ, ಪರೀಕ್ಷಾ ಭವನ ವರ್ಗಾವಣೆ, ಒಬಿಸಿ ವಿದ್ಯಾರ್ಥಿಗಳಿಗೂ ವಿದ್ಯಾರ್ಥಿ ವೇತನ ನೀಡಲು ಬಜೆಟ್‌ನಲ್ಲಿ ಅನುದಾನ ಇಡಲಾಗಿದೆ.

ಬೆಂಗಳೂರು ವಿವಿಯಲ್ಲಿ ಸೆಂಟ್ರಲ್‌ ಕಾಲೇಜು ಕ್ಯಾಂಪಸ್‌ ಉಳಿಸಿಕೊಳ್ಳಲು ಒತ್ತಡ ಹೇರಬೇಕು. ಈ ಸಂಬಂಧ ಉನ್ನತ ಶಿಕ್ಷಣ ಇಲಾಖೆಯ ಹಿರಿಯ ಅಧಿಕಾರಿಗಳನ್ನು ಕುಲಪತಿ ಪ್ರೊ. ಬಿ.ತಿಮ್ಮೇಗೌಡ ಭೇಟಿ ಮಾಡಿ ಮನವಿ ಮಾಡಬೇಕು ಎಂದು ಹಲವು ಸದಸ್ಯರು ಒತ್ತಾಯಿಸಿದರು.

‘ವಿವಿ ಅಧಿಕಾರಿಗಳನ್ನು ವಿಶ್ವಾಸಕ್ಕೆ ತೆಗೆದುಕೊಳ್ಳದೆ ಸರ್ಕಾರ ವಿಭಜನೆಯ ನಿರ್ಧಾರ ತೆಗೆದುಕೊಂಡಿದೆ ’ ಎಂದು ತಿಮ್ಮೇಗೌಡ ಅಸಮಾಧಾನ ವ್ಯಕ್ತಪಡಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.