ADVERTISEMENT

ಬೊಮ್ಮನಹಳ್ಳಿಯಲ್ಲಿ ಹದಗೆಟ್ಟ ರಸ್ತೆ: ಸ್ಥಳೀಯರ ಆರೋಪ

​ಪ್ರಜಾವಾಣಿ ವಾರ್ತೆ
Published 18 ಮೇ 2017, 20:20 IST
Last Updated 18 ಮೇ 2017, 20:20 IST
ಹೊಂಗಸಂದ್ರದಲ್ಲಿ ಕೆಸರು ಗದ್ದೆಯಂತಾಗಿರುವ ರಸ್ತೆ
ಹೊಂಗಸಂದ್ರದಲ್ಲಿ ಕೆಸರು ಗದ್ದೆಯಂತಾಗಿರುವ ರಸ್ತೆ   

ಬೆಂಗಳೂರು: ಬೊಮ್ಮನಹಳ್ಳಿ ವಲಯವು ಬಿಬಿಎಂಪಿಗೆ ಸೇರ್ಪಡೆಗೊಂಡು ವರ್ಷಗಳೇ ಕಳೆದಿದ್ದರೂ ಇಲ್ಲಿನ ರಸ್ತೆಗಳನ್ನು ಅಭಿವೃದ್ಧಿ ಪಡಿಸುವ ಕೆಲಸ ಸಮರ್ಪಕವಾಗಿ ನಡೆಯುತ್ತಿಲ್ಲ ಎಂದು ಸ್ಥಳೀಯರು ಆರೋಪಿಸಿದ್ದಾರೆ.

ಇಲ್ಲಿನ ಬಹುತೇಕ ರಸ್ತೆಗಳು ಜನರ ಉಪಯೋಗಕ್ಕೆ ಯೋಗ್ಯವಾಗಿಲ್ಲ. ಸಾಧಾರಣ ಮಳೆ ಬಂದರೂ ರಸ್ತೆಗಳಲ್ಲಿ ಓಡಾಡಲು ಸಾಧ್ಯವಾಗುವುದಿಲ್ಲ.

‘ಒಂದು ವಾರದಿಂದ ಸುರಿಯುತ್ತಿರುವ ಮಳೆಯಿಂದ ಡಾಂಬರು ಹಾಕದ ರಸ್ತೆಗಳು ಕೆಸರು ಗದ್ದೆಯಂತಾಗಿವೆ. ಇದರಿಂದ ದ್ವಿಚಕ್ರ ವಾಹನ ಸವಾರರು ಜೀವಭಯದಲ್ಲಿ ವಾಹನ ಓಡಿಸುವಂತಾಗಿದೆ’ ಎಂದು ವಾಜಪೇಯಿ ಬಡಾವಣೆಯ ಗ್ಲಾಡಿಸ್ ಪರೇರಾ ಅಳಲು ತೋಡಿಕೊಂಡರು.

ADVERTISEMENT

‘ರಾಜ್ಯ ಸರ್ಕಾರವು ರಸ್ತೆಗಳ ಅಭಿವೃದ್ಧಿಗೆ ನಗರೋತ್ಥಾನ ಯೋಜನೆಯಡಿ ನೂರಾರು ಕೋಟಿ ಖರ್ಚು ಮಾಡುತ್ತಿದೆ. ಆದರೆ, ಆ ಹಣ 
ಸಮರ್ಪಕವಾಗಿ ಬಳಕೆ ಆಗುತ್ತಿಲ್ಲ’ ಎಂದು  ಗಾರ್ವೆಬಾವಿಪಾಳ್ಯದ ದಯಾನಂದ್ ದೂರಿದರು.

‘ಪ್ರಭಾವಿಗಳು ವಾಸಿಸುವ ಬಡಾವಣೆಗಳಲ್ಲಿ ಮಾತ್ರ ಉತ್ತಮ ರಸ್ತೆಗಳನ್ನು ನಿರ್ಮಿಸಲಾಗಿದೆ. ಜನಸಾಮಾನ್ಯರು ವಾಸಿಸುವ ಪ್ರದೇಶಗಳ ರಸ್ತೆಗಳನ್ನು ಕಡೆಗಣಿಸಲಾಗಿದೆ’ ಎಂದು ಆರೋಪಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.