ADVERTISEMENT

ಭಾಷಾ ಅಲ್ಪಸಂಖ್ಯಾತ ಕೋಟಾ: ಪರೀಕ್ಷೆಗೆ ಅನುಮತಿ

​ಪ್ರಜಾವಾಣಿ ವಾರ್ತೆ
Published 22 ಮಾರ್ಚ್ 2018, 20:42 IST
Last Updated 22 ಮಾರ್ಚ್ 2018, 20:42 IST

ಬೆಂಗಳೂರು: ‘ಪ್ರಾಥಮಿಕ ಶಿಕ್ಷಣದಿಂದ ಪದವಿಯವರೆಗೂ ಕರ್ನಾಟಕದಲ್ಲಿ ಓದಿದ ಅನ್ಯ ರಾಜ್ಯದ ವಿದ್ಯಾರ್ಥಿಗಳಿಗೆ ಭಾಷಾ ಅಲ್ಪಸಂಖ್ಯಾತ ಕೋಟಾದಡಿ ವೈದ್ಯಕೀಯ ಸ್ನಾತಕೋತ್ತರ ಪ್ರವೇಶ ಪರೀಕ್ಷೆ ಎದುರಿಸಲು ಅನುಮತಿ ನೀಡಬಹುದು’ ಎಂದು ಹೈಕೋರ್ಟ್‌ ಅಭಿಪ್ರಾಯಪಟ್ಟಿದೆ.

ಭಾಷಾ ಅಲ್ಪಸಂಖ್ಯಾತ ಕೋಟಾದಡಿ 2018ನೇ ಸಾಲಿನ ಸ್ನಾತಕೋತ್ತರ ವೈದ್ಯಕೀಯ ಪ್ರವೇಶ ಪರೀಕ್ಷೆಗೆ ಸಮೀರಾ ಅವರಿಗೆ ಅನುಮತಿ ನೀಡುವಂತೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರಕ್ಕೆ (ಕೆಇಎ) ನಿರ್ದೇಶಿಸಲಾಗಿದೆ.

ಈ ಕುರಿತಂತೆ ನಗರದ ವಿದ್ಯಾರ್ಥಿನಿ ಡಾ.ಪಿ.ಸಮೀರಾ ನಾರಾಯಣ್  ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ಬಿ.ಎಸ್‌.ಪಾಟೀಲ ಹಾಗೂ ನ್ಯಾಯಮೂರ್ತಿ ಎಸ್‌.ಸುನಿಲ್ ದತ್ ಯಾದವ್ ಅವರಿದ್ದ ವಿಭಾಗೀಯ ನ್ಯಾಯಪೀಠ ಗುರುವಾರ ಮಾನ್ಯ ಮಾಡಿದೆ.

ADVERTISEMENT

‘ಅರ್ಜಿದಾರರು 19 ವರ್ಷಗಳಿಂದ ಕರ್ನಾಟಕದಲ್ಲೇ ನೆಲೆಸಿದವರಾಗಿದ್ದಾರೆ. ಆದರೆ, ಅವರ ತಂದೆ ಇಲ್ಲಿ ನೆಲೆಸಿಲ್ಲ ಎಂಬ ಆಕ್ಷೇಪಣೆ ಅಡಿ ವಿದ್ಯಾರ್ಥಿನಿ ಅವಕಾಶ ವಂಚಿತರಾಗಬೇಕಿಲ್ಲ’ ಎಂದು ಕೋರ್ಟ್ ಅಭಿಪ್ರಾಯಪಟ್ಟಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.