ADVERTISEMENT

ಭಾಷಾ ಮಾಧ್ಯಮ ಉಸ್ತುವಾರಿ ಸಮಿತಿ ರಚನೆ

ಬರಗೂರು ರಾಮಚಂದ್ರಪ್ಪ ಸಲಹೆ

​ಪ್ರಜಾವಾಣಿ ವಾರ್ತೆ
Published 30 ಮೇ 2014, 20:04 IST
Last Updated 30 ಮೇ 2014, 20:04 IST
ಬೆಂಗಳೂರು ಪ್ರೆಸ್‌ ಕ್ಲಬ್‌ ಆಶ್ರಯದಲ್ಲಿ ಪ್ರೆಸ್‌ ಕ್ಲಬ್‌ನಲ್ಲಿ ಶುಕ್ರವಾರ ನಡೆದ ‘ಕನ್ನಡ ಭಾಷಾ ಮಾಧ್ಯಮ– ರಾಜಕಾರಣ ಮತ್ತು ಕಾನೂನು ಸವಾಲುಗಳು’ ಕುರಿತ ವಿಚಾರಸಂಕಿರಣದಲ್ಲಿ ಹಿರಿಯ ಸಾಹಿತಿಗಳಾದ ಬರಗೂರು ರಾಮಚಂದ್ರಪ್ಪ ಹಾಗೂ ಚಂದ್ರಶೇಖರ ಕಂಬಾರ ಹಸ್ತಲಾಘವ ಮಾಡಿದರು. ವಿಧಾನ ಪರಿಷತ್‌ ಸದಸ್ಯೆ ಪ್ರೊ. ಎಸ್‌.ಆರ್‌. ಲೀಲಾ, ಅಡ್ವೊಕೇಟ್‌ ಜನರಲ್‌ ಪ್ರೊ. ರವಿವರ್ಮ ಕುಮಾರ್‌ ಚಿತ್ರದಲ್ಲಿದ್ದಾರೆ                                       –ಪ್ರಜಾವಾಣಿ ಚಿತ್ರ
ಬೆಂಗಳೂರು ಪ್ರೆಸ್‌ ಕ್ಲಬ್‌ ಆಶ್ರಯದಲ್ಲಿ ಪ್ರೆಸ್‌ ಕ್ಲಬ್‌ನಲ್ಲಿ ಶುಕ್ರವಾರ ನಡೆದ ‘ಕನ್ನಡ ಭಾಷಾ ಮಾಧ್ಯಮ– ರಾಜಕಾರಣ ಮತ್ತು ಕಾನೂನು ಸವಾಲುಗಳು’ ಕುರಿತ ವಿಚಾರಸಂಕಿರಣದಲ್ಲಿ ಹಿರಿಯ ಸಾಹಿತಿಗಳಾದ ಬರಗೂರು ರಾಮಚಂದ್ರಪ್ಪ ಹಾಗೂ ಚಂದ್ರಶೇಖರ ಕಂಬಾರ ಹಸ್ತಲಾಘವ ಮಾಡಿದರು. ವಿಧಾನ ಪರಿಷತ್‌ ಸದಸ್ಯೆ ಪ್ರೊ. ಎಸ್‌.ಆರ್‌. ಲೀಲಾ, ಅಡ್ವೊಕೇಟ್‌ ಜನರಲ್‌ ಪ್ರೊ. ರವಿವರ್ಮ ಕುಮಾರ್‌ ಚಿತ್ರದಲ್ಲಿದ್ದಾರೆ –ಪ್ರಜಾವಾಣಿ ಚಿತ್ರ   

ಬೆಂಗಳೂರು: ‘ಕನ್ನಡ ಭಾಷೆಯ ರಕ್ಷಣೆಗಾಗಿ ರಾಜ್ಯ ಸರ್ಕಾರ ಭಾಷಾ ಮಾಧ್ಯಮ ಉಸ್ತುವಾರಿ ಸಮಿತಿಯನ್ನು ರಚಿಸಬೇಕು’ ಎಂದು ಹಿರಿಯ ಸಾಹಿತಿ ಬರಗೂರು ರಾಮಚಂದ್ರಪ್ಪ ಸಲಹೆ ನೀಡಿದರು.

ಬೆಂಗಳೂರು ಪ್ರೆಸ್‌ ಕ್ಲಬ್‌ ಆಶ್ರ ಯದಲ್ಲಿ ಪ್ರೆಸ್‌ ಕ್ಲಬ್‌ನಲ್ಲಿ ಶುಕ್ರವಾರ ನಡೆದ ‘ಕನ್ನಡ ಭಾಷಾ ಮಾಧ್ಯಮ– ರಾಜಕಾರಣ ಮತ್ತು ಕಾನೂನು ಸವಾಲುಗಳು’ ಕುರಿತ ವಿಚಾರಸಂಕಿ ರಣದಲ್ಲಿ ಅವರು ಮಾತನಾಡಿದರು.

‘ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣ ಸಚಿವರು ಹಾಗೂ ಅಡ್ವೊಕೇಟ್‌ ಜನರಲ್‌ ಈ ಸಮಿತಿಯ ನೇತೃತ್ವ ವಹಿಸ ಬೇಕು. ಈ ಸಮಿತಿಯಲ್ಲಿ ಕಾನೂನು ಪಂಡಿತರು, ಶಿಕ್ಷಣ ತಜ್ಞರು, ಚಿಂತಕರು ಇರಬೇಕು. ಸರ್ಕಾರಿ ಪ್ರಾಥಮಿಕ ಶಾಲೆಗಳ ಗುಣಮಟ್ಟ ಹೆಚ್ಚಿಸಲು ತೆಗೆದುಕೊಳ್ಳಬೇಕಾದ ಕ್ರಮಗಳ ಬಗ್ಗೆಯೂ ಸಮಿತಿ ಸಲಹೆ ನೀಡಬೇಕು’ ಎಂದರು.

ಹಿರಿಯ ಸಾಹಿತಿ ಡಾ. ಚಂದ್ರಶೇಖರ ಕಂಬಾರ, ‘ರಾಜ್ಯ ಭಾಷೆಗಳೇ ಶಿಕ್ಷಣದ ಸಂವಹನ ಭಾಷೆಗಳಾಗಬೇಕು ಎಂದು ಕೇಂದ್ರ ಸಾಹಿತ್ಯ ಅಕಾಡೆಮಿ ತೀರ್ಮಾನ ತೆಗೆದುಕೊಂಡಿದೆ. ಕನ್ನಡಕ್ಕೆ ಶಾಸ್ತ್ರೀಯ ಭಾಷೆಯ ಸ್ಥಾನಮಾನ ನೀಡುವಾಗ ಕೇಂದ್ರ ಸರ್ಕಾರವು ಸಾಹಿತ್ಯ ಅಕಾಡೆ ಮಿಯ ಸಲಹೆ ಪಡೆದಿತ್ತು. ಆದರೆ, ಭಾಷಾ ಮಾಧ್ಯಮದ ತೀರ್ಪು ನೀಡುವಾಗ ಸುಪ್ರೀಂ ಕೋರ್ಟ್‌ ಅಕಾ ಡೆಮಿಯ ಅಭಿಪ್ರಾಯವನ್ನೇ ಕೇಳಿಲ್ಲ’ ಎಂದು ಬೇಸರ ವ್ಯಕ್ತಪಡಿಸಿದರು.

ಅಡ್ವೊಕೇಟ್‌ ಜನರಲ್‌ ಪ್ರೊ. ರವಿವರ್ಮ ಕುಮಾರ್‌, ‘ಜಾಗತೀಕರಣ ಪ್ರವೇಶಿಸುವ ತನಕ ದೇಶದಲ್ಲಿ ಸಾಮೂಹಿಕ ಹಕ್ಕುಗಳಿಗೆ ಪ್ರಾಧಾನ್ಯತೆ ಸಿಕ್ಕಿತ್ತು. ಈಗ ಸಾಮೂಹಿಕ ಹಕ್ಕುಗಳ ಬದಲು ವೈಯಕ್ತಿಕ ಹಕ್ಕುಗಳಿಗೆ ಹೆಚ್ಚಿನ ಬೆಲೆ ಸಿಗುತ್ತಿದೆ. ಭಾಷಾ ಮಾಧ್ಯಮ ಕುರಿತ ತೀರ್ಪಿನಲ್ಲೂ ಇದೇ ರೀತಿ ಆಗಿದೆ’ ಎಂದು ಬೇಸರ ವ್ಯಕ್ತಪಡಿಸಿದರು.

ವಿಧಾನ ಪರಿಷತ್‌ ಸದಸ್ಯೆ ಪ್ರೊ. ಎಸ್‌.ಆರ್‌. ಲೀಲಾ, ಪ್ರೆಸ್‌ ಅಧ್ಯಕ್ಷ ಪಿ. ರಾಮಕೃಷ್ಣ ಉಪಾಧ್ಯ, ಉಪಾಧ್ಯಕ್ಷ ಗುಡಿಹಳ್ಳಿ ನಾಗರಾಜ್‌ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.