ADVERTISEMENT

ಮಂತ್ರಿಗಿರಿ ಜಗಳದಿಂದ ಅಭಿವೃದ್ಧಿ ಕುಂಠಿತ

ಮಂತ್ರಿಗಿರಿ ಜಗಳದಿಂದ ಅಭಿವೃದ್ಧಿ ಕುಂಠಿತ

​ಪ್ರಜಾವಾಣಿ ವಾರ್ತೆ
Published 26 ಜೂನ್ 2016, 20:00 IST
Last Updated 26 ಜೂನ್ 2016, 20:00 IST
ಬಿ.ಎಸ್‌.ಯಡಿಯೂರಪ್ಪ ಅವರನ್ನು ಮೆರವಣಿಗೆಯೊಂದಿಗೆ ವೇದಿಕೆಗೆ  ಕರೆತರಲಾಯಿತು. ಶಾಸಕ ಎಸ್‌.ಆರ್‌.ವಿಶ್ವನಾಥ್‌ ಇದ್ದಾರೆ.
ಬಿ.ಎಸ್‌.ಯಡಿಯೂರಪ್ಪ ಅವರನ್ನು ಮೆರವಣಿಗೆಯೊಂದಿಗೆ ವೇದಿಕೆಗೆ ಕರೆತರಲಾಯಿತು. ಶಾಸಕ ಎಸ್‌.ಆರ್‌.ವಿಶ್ವನಾಥ್‌ ಇದ್ದಾರೆ.   

ಬೆಂಗಳೂರು: ‘ಸಿದ್ದರಾಮಯ್ಯ ನೇತೃತ್ವದ ಸರ್ಕಾರದಲ್ಲಿ ಮಂತ್ರಿಗಿರಿಗಾಗಿ ಜಗಳ ನಡೆಯುತ್ತಿದೆ. ಅವರ ಒಳಜಗಳದಿಂದ ರಾಜ್ಯದ ಅಭಿವೃದ್ಧಿ ಕುಠಿತವಾಗಿದೆ’ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ  ಯಡಿಯೂರಪ್ಪ ಆರೋಪಿಸಿದರು. ಬಿಜೆಪಿ ಯಲಹಂಕ ವಿಧಾನಸಭಾ ಕ್ಷೇತ್ರದ ವತಿಯಿಂದ  ಭಾನುವಾರ ಆಯೋಜಿಸಿದ್ದ ಕಾರ್ಯಕರ್ತರ ಸಮಾ ವೇಶವನ್ನು ಉದ್ಘಾಟಿಸಿ ಅವರು ಮಾತನಾಡಿದರು.

‘ಲೋಕಾಯುಕ್ತರನ್ನು ನೇಮಕ ಮಾಡಲು ಮುಖ್ಯಮಂತ್ರಿಗೆ ಇದುವರೆಗೂ ಸಾಧ್ಯವಾಗಿಲ್ಲ. ಅರ್ಕಾವತಿ ಬಡಾವಣೆಯ ನಿವೇಶನ ಹಂಚಿಕೆ ಹಗರಣಕ್ಕೆ ಸಂಬಂಧಿಸಿದ 44 ಕಡತಗಳು ನಾಪತ್ತೆಯಾಗಿರುವುದು ಆಡಳಿತ  ವೈಫಲ್ಯಕ್ಕೆ ಉದಾಹರಣೆ. ಬೆಂಗಳೂರು ನಗರದಲ್ಲಿ ಗುಂಡಿ ಬಿದ್ದಿರುವ ರಸ್ತೆಗಳನ್ನು ದುರಸ್ತಿಮಾಡಲೂ ಸಾಧ್ಯವಾಗದಂತಹ ದುಸ್ಥಿತಿ ಇದೆ. ಭ್ರಷ್ಟಾಚಾರ ಮಾತ್ರ ವ್ಯಾಪಕವಾಗಿದೆ’  ಎಂದು ಅವರು ಕಾಂಗ್ರೆಸ್‌ ಸರ್ಕಾರದ ವಿರುದ್ಧ  ವಾಗ್ದಾಳಿ ನಡೆಸಿದರು.

‘ಸರ್ಕಾರದ ವೈಫಲ್ಯಗಳನ್ನು ಮುಂದಿಟ್ಟು ಕೊಂಡು ಮುಂದಿನ ಚುನಾವಣೆ ಎದುರಿಸಬೇಕಾದ ಅಗತ್ಯವಿಲ್ಲ. ಬಿಜೆಪಿ ಆಡಳಿತಾವಧಿಯ ಜನಪರ ಕಾರ್ಯಕ್ರಮಗಳು ಹಾಗೂ ಕಳೆದ ಎರಡು ವರ್ಷಗಳಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ಸಾಧನೆಗಳನ್ನು ಜನರಿಗೆ ತಿಳಿಸುವ ಮೂಲಕ ರಾಜ್ಯದಲ್ಲಿ ಬಿಜೆಪಿಯನ್ನು ಮತ್ತೆ ಅಧಿಕಾರಕ್ಕೆ ತರುತ್ತೇವೆ’ ಎಂದರು.

‘ರಾಜ್ಯದ 224 ಕ್ಷೇತ್ರಗಳಲ್ಲಿ ಬಿಜೆಪಿ ಕಾರ್ಯಕರ್ತರ ಸಮಾವೇಶಗಳನ್ನು ಹಮ್ಮಿಕೊಳ್ಳಲಿದ್ದೇವೆ. ಮುಂದಿನ ವಿಧಾನಸಭಾ ಚುನಾವಣೆಯಲ್ಲಿ 150ಕ್ಕೂ ಹೆಚ್ಚು ಸ್ಥಾನಗಳಲ್ಲಿ ಗೆಲುವು ಸಾಧಿಸುವ ವಿಶ್ವಾಸವಿದೆ.  ಮಾದರಿ ರಾಜ್ಯ ನಿರ್ಮಾಣ ನಮ್ಮ ಗುರಿ’ ಎಂದರು.

ಶಾಸಕ ಎಸ್‌.ಆರ್‌.ವಿಶ್ವನಾಥ್‌ ಮಾತನಾಡಿ, ‘ಬಿಜೆಪಿ ಆಡಳಿತಾವಧಿಯಲ್ಲಿ ಅರ್ಕಾವತಿ ನದಿ ಪುನಶ್ಚೇತನಕ್ಕೆ ₹ 23 ಕೋಟಿ, ಯಲಹಂಕ ಕೆರೆ ಅಭಿವೃದ್ಧಿಗೆ ₹ 13 ಕೋಟಿ  ಅನುದಾನ ಮಂಜೂರಾಗಿತ್ತು. ಕ್ಷೇತ್ರದಲ್ಲಿ ಬಡವರಿಗೆ 9 ಸಾವಿರ ಮನೆಗಳನ್ನು ನಿರ್ಮಿಸಿಕೊಟ್ಟಿದ್ದೆವು.  ಕಾಂಗ್ರೆಸ್‌ ಅಧಿಕಾರಕ್ಕೆ ಬಂದ ನಂತರ ಒಂದು ಮನೆಯನ್ನೂ ಕಟ್ಟಿಸಿಕೊಟ್ಟಿಲ್ಲ. ಕಾಂಗ್ರೆಸ್ ಆಡಲಿತದಲ್ಲಿ ಅಭಿವೃದ್ಧಿ ಸಂಪೂರ್ಣ ಕುಂಠಿತಗೊಂಡಿದೆ ಎಂದು ಅವರು ದೂರಿದರು.

Lok Sabha Elections Results 2024 |ನರೇಂದ್ರ ಮೋದಿ ಅವರ 'ವಿಕಸಿತ ಭಾರತ' ಅಥವಾ ರಾಹುಲ್ ಗಾಂಧಿ ಅವರ ಇಂಡಿಯಾ ಐಕ್ಯ ಭಾರತ? ಜಗತ್ತಿನ ಅತಿದೊಡ್ಡ ಪ್ರಜಾಪ್ರಭುತ್ವದ 18ನೇ ಲೋಕಸಭೆಗೆ ನಡೆದ ಚುನಾವಣೆ ಫಲಿತಾಂಶದ ಕ್ಷಣ ಕ್ಷಣದ ಮಾಹಿತಿ, ವಿಶ್ವಾಸಾರ್ಹ ವಿಶ್ಲೇಷಣೆ, ಅಂಕಿ ಅಂಶಗಳಿಗಾಗಿ ಪ್ರಜಾವಾಣಿ ನೋಡಿ. ಇದರ ಜೊತಗೆ, ಆಂಧ್ರಪ್ರದೇಶ ಮತ್ತು ಒಡಿಶಾ ವಿಧಾನಸಭೆ ಚುನಾವಣೆಯ ಫಲಿತಾಂಶವೂ ಇಲ್ಲೇ ಲಭ್ಯ. ಪ್ರಜಾವಾಣಿಯನ್ನು ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಫಾಲೋ ಮಾಡಲು ಮರೆಯದಿರಿ.