ADVERTISEMENT

ಮಕ್ಕಳ ಬ್ಯಾಗ್‌ನಲ್ಲಿ ₹2 ಕೋಟಿ ಮಾದಕ ವಸ್ತು ಸಾಗಣೆ

​ಪ್ರಜಾವಾಣಿ ವಾರ್ತೆ
Published 25 ಮೇ 2017, 19:30 IST
Last Updated 25 ಮೇ 2017, 19:30 IST
ಬೆಂಗಳೂರು: ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಮೂಲಕ ಮಾದಕ ವಸ್ತು ಸಾಗಣೆ ಮಾಡುತ್ತಿದ್ದ ಚೆನ್ನೈನ ಮುಜಿಬುರ್‌ ರೆಹಮಾನ್‌ ನೈನಾ ಮೊಹಮ್ಮದ್‌ ಎಂಬಾತ ಗುರುವಾರ ಮಾದಕ ವಸ್ತು ನಿಯಂತ್ರಣ ದಳದ (ಎನ್‌ಸಿಬಿ) ಅಧಿಕಾರಿಗಳ ಬಲೆಗೆ ಬಿದ್ದಿದ್ದಾನೆ.
 
‘ಮಲೇಷಿಯಾಗೆ ಹೋಗುತ್ತಿದ್ದ ಆರೋಪಿಯನ್ನು ಪರಿಶೀಲನೆಗೆ ಒಳಪಡಿಸಿದ್ದೆವು. ಆತನ ಬಳಿ ಶಾಲಾಮಕ್ಕಳು ಬಳಸುವ 30 ಬ್ಯಾಗ್‌ಗಳು ಸಿಕ್ಕಿದ್ದವು.

ಅವುಗಳಲ್ಲೇ  ₹2 ಕೋಟಿ ಮೌಲ್ಯದ ಮಾದಕ ವಸ್ತು ಇತ್ತು. ಅದನ್ನು ಜಪ್ತಿ ಮಾಡಿದ್ದೇವೆ’ ಎಂದು ಎನ್‌ಸಿಬಿಯ ಪ್ರಾದೇಶಿಕ ನಿರ್ದೇಶಕ ಸುನೀಲ್‌ಕುಮಾರ್‌ ಸಿನ್ಹಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
 
‘ಆರೋಪಿಯನ್ನು ಬಂಧಿಸಿ ವಿಚಾರಣೆ ನಡೆಸುತ್ತಿದ್ದೇವೆ. ಶ್ರೀಲಂಕಾ ಹಾಗೂ ಮಲೇಷಿಯಾಗೆ ಈತ ನಿರಂತರವಾಗಿ ಮಾದಕ ವಸ್ತು ಸಾಗಣೆ ಮಾಡುತ್ತಿದ್ದ ಎಂಬುದು ಗೊತ್ತಾಗಿದೆ’ ಎಂದಿದ್ದಾರೆ.
 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.