ಬೆಂಗಳೂರು: ನಗರದ ನಾಗರಿಕರಿಗೆ ಮಕ್ಕಳ ಹಕ್ಕುಗಳ ಬಗ್ಗೆ ಮಾಹಿತಿ ನೀಡಲು ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಹಾಗೂ ಚೈಲ್ಡ್ ರೈಟ್ ಟ್ರಸ್ಟ್ ಜತೆಗೂಡಿ ಸರಣಿ ತರಬೇತಿಯನ್ನು ಹಮ್ಮಿಕೊಂಡಿವೆ.
ಪ್ರತಿ ಶನಿವಾರ ಬೆಳಿಗ್ಗೆ 9.30ರಿಂದ ಮಧ್ಯಾಹ್ನ 12.30ರ ವರೆಗೆ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಕಚೇರಿಯಲ್ಲಿ ತರಬೇತಿ ನಡೆಯಲಿದ್ದು 30 ಮಂದಿ ಪಾಲ್ಗೊಳ್ಳಬಹುದು. ಭಾಗವಹಿಸಲು ಇಚ್ಛಿಸುವವರು ತಮ್ಮ ಹೆಸರು ನೋಂದಾಯಿಸಿಕೊಳ್ಳಬೇಕು. ಪ್ರವೇಶ ಶುಲ್ಕ ಇರುವುದಿಲ್ಲ. ಮಕ್ಕಳು, ಶಿಕ್ಷಕರು, ಪೋಷಕರು, ಅಧಿಕಾರಿಗಳು, ಪೊಲೀಸರಿಗೂ ತರಬೇತಿ ಇರುತ್ತದೆ. ಇದೇ 29ರಂದು ತರಬೇತಿ ಆರಂಭ. ಮಾಹಿತಿಗೆ: 080–22115291.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.