ADVERTISEMENT

ಮಣಿಪುರದ ಐವರ ಮೇಲೆ ಹಲ್ಲೆ

ಮಾರಕಾಸ್ತ್ರಗಳಿಂದ ಹಲ್ಲೆ l ಆರೋಪಿಗಳು ಪರಾರಿ

​ಪ್ರಜಾವಾಣಿ ವಾರ್ತೆ
Published 26 ಸೆಪ್ಟೆಂಬರ್ 2016, 19:50 IST
Last Updated 26 ಸೆಪ್ಟೆಂಬರ್ 2016, 19:50 IST

ಬೆಂಗಳೂರು: ಕೆಲಸ ಮುಗಿಸಿಕೊಂಡು ಮನೆಗೆ ಹೋಗುತ್ತಿದ್ದ ಮಣಿಪುರ ಮೂಲದ ಐವರ ಮೇಲೆ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿರುವ ಘಟನೆ ನಗರದ ಆಸ್ಟಿನ್‌ ಟೌನ್‌ ಬಳಿ ಸೋಮವಾರ  ನಡೆದಿದೆ.

ಮಣಿಪುರದ ಬುಡಕಟ್ಟಿನ ‘ಕುಕಿ’ ಸಮುದಾಯಕ್ಕೆ ಸೇರಿದ ಇಬ್ಬರು ಬೆಳಗಿನ ಜಾವ 3ರ ಸುಮಾರಿಗೆ ಕೆಲಸ ಮುಗಿ ಸಿಕೊಂಡು ಬೈಕ್‌ಗಳಲ್ಲಿ ಮನೆಗೆ ಹೋಗುತ್ತಿದ್ದರು. ಈ ವೇಳೆ ಬೈಕ್‌ಗಳನ್ನು ಅಡ್ಡಗಟ್ಟಿದ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿದ್ದಾರೆ.

ಇದೇ ಮಾರ್ಗವಾಗಿ ಹೋಗುತ್ತಿದ್ದ ಮಣಿಪುರದ ಮತ್ತೊಂದು ಬುಡಕಟ್ಟಿನ ‘ತಂಗ್‌ಖುಲ್‌’ ಸಮುದಾಯದ ಮೂವರು ಹಲ್ಲೆಗೊಳಗಾದವರ ನೆರವಿಗೆ ಬಂದಿದ್ದಾರೆ. ಇದನ್ನು ಗಮನಿಸಿದ ದುಷ್ಕರ್ಮಿಗಳು ಪರಾರಿಯಾಗಿದ್ದಾರೆ.

ಘಟನೆಯಲ್ಲಿ ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಉಳಿದವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಅವರನ್ನು ಸೇಂಟ್ ಫಿಲೋಮಿನಾ ಆಸ್ಪತ್ರೆಗೆ ದಾಖಲಿಸಲಾಗಿದೆ.

‘ದುಷ್ಕರ್ಮಿಗಳು ನಮ್ಮ ಬಳಿ ಇದ್ದ ಹಣ ಹಾಗೂ ಬೈಕ್‌ಗಳನ್ನು ಕಿತ್ತುಕೊಂಡು ಪರಾರಿಯಾದರು’ ಎಂದು ಗಾಯಾಳುಗಳು ತಿಳಿಸಿದರು.
ಆದರೆ, ಈ ಸಂಬಂಧ ಅಶೋಕ ನಗರ ಪೊಲೀಸ್ ಠಾಣೆಯಲ್ಲಿ ಯಾವುದೇ ದೂರು ದಾಖಲಾಗಿಲ್ಲ.

Lok Sabha Elections Results 2024 |ನರೇಂದ್ರ ಮೋದಿ ಅವರ 'ವಿಕಸಿತ ಭಾರತ' ಅಥವಾ ರಾಹುಲ್ ಗಾಂಧಿ ಅವರ ಇಂಡಿಯಾ ಐಕ್ಯ ಭಾರತ? ಜಗತ್ತಿನ ಅತಿದೊಡ್ಡ ಪ್ರಜಾಪ್ರಭುತ್ವದ 18ನೇ ಲೋಕಸಭೆಗೆ ನಡೆದ ಚುನಾವಣೆ ಫಲಿತಾಂಶದ ಕ್ಷಣ ಕ್ಷಣದ ಮಾಹಿತಿ, ವಿಶ್ವಾಸಾರ್ಹ ವಿಶ್ಲೇಷಣೆ, ಅಂಕಿ ಅಂಶಗಳಿಗಾಗಿ ಪ್ರಜಾವಾಣಿ ನೋಡಿ. ಇದರ ಜೊತಗೆ, ಆಂಧ್ರಪ್ರದೇಶ ಮತ್ತು ಒಡಿಶಾ ವಿಧಾನಸಭೆ ಚುನಾವಣೆಯ ಫಲಿತಾಂಶವೂ ಇಲ್ಲೇ ಲಭ್ಯ. ಪ್ರಜಾವಾಣಿಯನ್ನು ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಫಾಲೋ ಮಾಡಲು ಮರೆಯದಿರಿ.