ADVERTISEMENT

ಮಲ್ಲೇಶ್ವರ: ಬಾಂಬ್ ಸ್ಫೋಟದಲ್ಲಿ ಗಾಯಗೊಂಡಿದ್ದ ಲಿಷಾಗೆ ಸರ್ಕಾರಿ ನೌಕರಿ

​ಪ್ರಜಾವಾಣಿ ವಾರ್ತೆ
Published 22 ಜೂನ್ 2017, 19:30 IST
Last Updated 22 ಜೂನ್ 2017, 19:30 IST
ಮಲ್ಲೇಶ್ವರ: ಬಾಂಬ್ ಸ್ಫೋಟದಲ್ಲಿ ಗಾಯಗೊಂಡಿದ್ದ ಲಿಷಾಗೆ ಸರ್ಕಾರಿ ನೌಕರಿ
ಮಲ್ಲೇಶ್ವರ: ಬಾಂಬ್ ಸ್ಫೋಟದಲ್ಲಿ ಗಾಯಗೊಂಡಿದ್ದ ಲಿಷಾಗೆ ಸರ್ಕಾರಿ ನೌಕರಿ   

ಬೆಂಗಳೂರು: ಬಾಂಬ್‌ ಸ್ಫೋಟದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಸಿ. ಲಿಷಾಗೆ ಸಿ ದರ್ಜೆ ನೌಕರಿ ನೀಡಲು ರಾಜ್ಯ ಸರ್ಕಾರ ನಿರ್ಧರಿಸಿದೆ.

ಮಲ್ಲೇಶ್ವರದ ಬಿಜೆಪಿ ಕಚೇರಿ ಬಳಿ ನಡೆದ ಬಾಂಬ್‌ಸ್ಫೋಟದಲ್ಲಿ ಲಿಷಾ ಕಾಲಿಗೆ ಗಂಭೀರ ಗಾಯವಾಗಿತ್ತು. ಉದ್ಯೋಗ ನೀಡುವಂತೆ ಹೈಕೋರ್ಟ್ ಆದೇಶ ನೀಡಿದ್ದರೂ ಸರ್ಕಾರ ಅದನ್ನು ಪಾಲಿಸಿಲ್ಲ ಎಂದು ಆಕ್ಷೇಪಿಸಿ ಲಿಷಾ ಅವರು ಇತ್ತೀಚೆಗಷ್ಟೇ ಕೇಂದ್ರ ಮತ್ತು ರಾಜ್ಯ ಸರ್ಕಾರದ ವಿರುದ್ಧ ನ್ಯಾಯಾಂಗ ನಿಂದನೆ ಮೊಕದ್ದಮೆ ದಾಖಲಿಸಿದ್ದರು.

ಅನುಕಂಪದ ನೌಕರಿ: ಅಪಘಾತದಲ್ಲಿ ಮೃತಪಟ್ಟಿದ್ದ ಲೋಕಾಯುಕ್ತ ಎಸ್‌ಪಿ ರವಿಕುಮಾರ್‌ ಅವರ ಪತ್ನಿಗೆ ಅನುಕಂಪದ ಆಧಾರದಲ್ಲಿ ಉಪ ನೋಂದಣಾಧಿಕಾರಿ ಹುದ್ದೆ ನೀಡಲು ಸರ್ಕಾರ ನಿರ್ಧರಿಸಿದೆ. ಸಚಿವ ಸಂಪುಟ ಸಭೆಯಲ್ಲಿ  ಕೈಗೊಂಡ ಈ ಎರಡೂ ನಿರ್ಣಯಗಳನ್ನು ಕಾನೂನು ಸಚಿವ ಟಿ.ಬಿ. ಜಯಚಂದ್ರ ಮಾಧ್ಯಮ ಪ್ರತಿನಿಧಿಗಳಿಗೆ ತಿಳಿಸಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.