ADVERTISEMENT

‘ಮಳೆಗಾಲಕ್ಕೂ ಮುನ್ನವೇ ರಾಜಕಾಲುವೆ ಕಾಮಗಾರಿ ಮುಗಿಸಿ’

​ಪ್ರಜಾವಾಣಿ ವಾರ್ತೆ
Published 20 ಮಾರ್ಚ್ 2018, 19:37 IST
Last Updated 20 ಮಾರ್ಚ್ 2018, 19:37 IST
ಅರ್ಚಕ ವಾಸುದೇವ ಭಟ್‌ ಅವರ ಮನೆಗೆ ಕೆ.ಜೆ.ಜಾರ್ಜ್‌ ಭೇಟಿ ನೀಡಿದರು. ಕೆ.ಗೋಪಾಲಯ್ಯ, ಪಾಲಿಕೆ ಆಡಳಿತ ಪಕ್ಷದ ನಾಯಕ ಎಂ.ಶಿವರಾಜು ಇದ್ದಾರೆ
ಅರ್ಚಕ ವಾಸುದೇವ ಭಟ್‌ ಅವರ ಮನೆಗೆ ಕೆ.ಜೆ.ಜಾರ್ಜ್‌ ಭೇಟಿ ನೀಡಿದರು. ಕೆ.ಗೋಪಾಲಯ್ಯ, ಪಾಲಿಕೆ ಆಡಳಿತ ಪಕ್ಷದ ನಾಯಕ ಎಂ.ಶಿವರಾಜು ಇದ್ದಾರೆ   

ಬೆಂಗಳೂರು: ನಗರದಲ್ಲಿ ಕೈಗೊಂಡಿರುವ ರಾಜಕಾಲುವೆಗಳ ಕಾಮಗಾರಿಗಳನ್ನು ಮಳೆಗಾಲ ಆರಂಭವಾಗುವ ಮುನ್ನವೇ ಪೂರ್ಣಗೊಳಿಸುವಂತೆ ಬೆಂಗಳೂರು ಅಭಿವೃದ್ಧಿ ಸಚಿವ ಕೆ.ಜೆ.ಜಾರ್ಜ್‌ ಅಧಿಕಾರಿಗಳಿಗೆ ತಾಕೀತು ಮಾಡಿದರು.

ಚಿಕ್ಕಪೇಟೆ, ಶಾಂತಿನಗರ ಮತ್ತು ಮಹಾಲಕ್ಷ್ಮಿ ಬಡಾವಣೆಯ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಕೈಗೊಂಡಿರುವ ರಾಜಕಾಲುವೆ ಅಭಿವೃದ್ಧಿ ಕಾಮಗಾರಿಗಳನ್ನು ಅವರು ಮಂಗಳವಾರ ಪರಿಶೀಲಿಸಿದರು. ಶಾಸಕರಾದ ಎನ್‌.ಎ.ಹ್ಯಾರಿಸ್‌, ಆರ್‌.ವಿ.ದೇವರಾಜ್‌, ಕೆ.ಗೋಪಾಲಯ್ಯ ಇದ್ದರು.

ಶಾಂತಿನಗರದ ಬಿಎಂಟಿಸಿ ಬಸ್ ನಿಲ್ದಾಣದ ಬಳಿಯ ರಾಜಕಾಲುವೆಯ ತಡೆಗೋಡೆಯ ಎತ್ತರ ಕಡಿಮೆ ಇದ್ದು, ಮಳೆ ಬಂದಾಗ ನೀರು ಉಕ್ಕಿ ಹರಿಯುತ್ತದೆ. ಇದನ್ನು ತಪ್ಪಿಸುವ ಉದ್ದೇಶದಿಂದ 1.1 ಕಿ.ಮೀ. ಉದ್ದದ ಪರ್ಯಾಯ ಕಾಲುವೆ ನಿರ್ಮಿಸಲು ನಗರೋತ್ಥಾನ ಯೋಜನೆಯಡಿ ₹15 ಕೋಟಿ ಅನುದಾನ ಬಿಡುಗಡೆ ಮಾಡಲಾಗಿದೆ. ಟೆಂಡರ್‌ ಪ್ರಕ್ರಿಯೆ ಪೂರ್ಣಗೊಂಡಿದ್ದು, ಕೂಡಲೇ ಕಾಮಗಾರಿ ಆರಂಭಿಸಬೇಕು ಎಂದು ಸಚಿವರು ಸೂಚಿಸಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.