ADVERTISEMENT

ಮಹಾಯೋಜನೆ ಕರಡು ಪರಿಶೀಲನೆಗೆ ಸಮಿತಿ

​ಪ್ರಜಾವಾಣಿ ವಾರ್ತೆ
Published 22 ಮಾರ್ಚ್ 2018, 20:07 IST
Last Updated 22 ಮಾರ್ಚ್ 2018, 20:07 IST

ಬೆಂಗಳೂರು: ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಪರಿಷ್ಕೃತ ಮಹಾಯೋಜನೆ 2031ರ ಕರಡು ಸಂಬಂಧ ಸಲಹೆ ಹಾಗೂ ಆಕ್ಷೇಪಣೆಗಳನ್ನು ಕೂಲಂಕಷವಾಗಿ ಪರಿಶೀಲಿಸಲು ನಿವೃತ್ತ ಐಎಎಸ್ ಅಧಿಕಾರಿ ಬಿ.ಎಸ್‌.ಪಾಟೀಲ ಅಧ್ಯಕ್ಷತೆಯಲ್ಲಿ ತಜ್ಞರ ಸಮಿತಿಯನ್ನು ನಗರಾಭಿವೃದ್ಧಿ ಇಲಾಖೆ ರಚಿಸಿದೆ.

ನಿವೃತ್ತ ಐಎಎಸ್‌ ಅಧಿಕಾರಿ ಸಿದ್ದಯ್ಯ, ಬಿಡಿಎ ಆಯುಕ್ತ, ನಗರ ಮತ್ತು ಗ್ರಾಮಾಂತರ ಯೋಜನೆ ಇಲಾಖೆ ನಿರ್ದೇಶಕ, ನಗರ ಯೋಜನೆ ತಜ್ಞ ಆರ್‌.ಕೆ.ಮಿಶ್ರಾ ಸಮಿತಿಯ ಸದಸ್ಯರಾಗಿರುತ್ತಾರೆ. ಬಿಡಿಎ ನಗರ ಯೋಜನಾ ಸದಸ್ಯ, ಸಮಿತಿಯ ಸದಸ್ಯ ಕಾರ್ಯದರ್ಶಿ ಆಗಿರುವರು.

ಸಾರ್ವಜನಿಕರ ಆಕ್ಷೇಪಣೆ ಹಾಗೂ ಸಲಹೆಗಳನ್ನು ಸ್ವೀಕರಿಸಲು ಸಮಿತಿಗೆ ಮತ್ತೇ 30 ದಿನಗಳ ಕಾಲಾವಕಾಶ ನೀಡಲಾಗಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.