ADVERTISEMENT

ಮಹಾಶಿವರಾತ್ರಿಗೆ ಹೆಚ್ಚುವರಿ ಬಸ್‌

​ಪ್ರಜಾವಾಣಿ ವಾರ್ತೆ
Published 20 ಫೆಬ್ರುವರಿ 2017, 20:10 IST
Last Updated 20 ಫೆಬ್ರುವರಿ 2017, 20:10 IST

ಬೆಂಗಳೂರು: ಮಹಾಶಿವರಾತ್ರಿ ಹಬ್ಬದ ಪ್ರಯುಕ್ತ ಕೆಎಸ್‌ಆರ್‌ಟಿಸಿ ನಗರದಿಂದ ಇದೇ 23 ಹಾಗೂ 24ರಂದು 450 ಹೆಚ್ಚುವರಿ ಬಸ್‌ಗಳ ವ್ಯವಸ್ಥೆ ಮಾಡಲಿದೆ.

ಇದೇ 26ರಂದು ರಾಜ್ಯದ ಮತ್ತು ಅಂತರರಾಜ್ಯದ ವಿವಿಧ ಸ್ಥಳಗಳಿಂದ ಬೆಂಗಳೂರಿಗೆ ವಿಶೇಷ ಬಸ್‌ಗಳು ಸಂಚರಿಸಲಿವೆ.

ಮೆಜೆಸ್ಟಿಕ್‌ ಬಸ್ ನಿಲ್ದಾಣದಿಂದ ಧರ್ಮಸ್ಥಳ, ಕುಕ್ಕೆಸುಬ್ರಹ್ಮಣ್ಯ, ಶಿವಮೊಗ್ಗ, ಹಾಸನ, ಮಂಗಳೂರು, ಕುಂದಾಪುರ, ಶೃಂಗೇರಿ, ಹೊರನಾಡು, ದಾವಣಗೆರೆ, ಹುಬ್ಬಳ್ಳಿ, ಧಾರವಾಡ, ಬೆಳಗಾವಿ, ವಿಜಯಪುರ, ಗೋಕರ್ಣ, ಶಿರಸಿ, ಕಾರವಾರ, ರಾಯಚೂರು, ಕಲಬುರಗಿ, ಬಳ್ಳಾರಿ, ಕೊಪ್ಪಳ, ಯಾದಗಿರಿ, ಬೀದರ್, ತಿರುಪತಿ, ಪಾವಗಡ, ಹೊಸದುರ್ಗಕ್ಕೆ ಈ ಬಸ್‌ಗಳು ಸಂಚಾರ ಮಾಡಲಿವೆ.

ADVERTISEMENT

ಮೈಸೂರು ರಸ್ತೆ ಬಸ್ ನಿಲ್ದಾಣದಿಂದ ಮೈಸೂರು, ಹುಣಸೂರು, ಪಿರಿಯಾಪಟ್ಟಣ, ವಿರಾಜಪೇಟೆ, ಕುಶಾಲನಗರ, ಮಡಿಕೇರಿ ಮಾರ್ಗದ ಕಡೆ ಕಾರ್ಯಾಚರಣೆ ಮಾಡಲಿವೆ.

ಶಾಂತಿನಗರದ ಬಿಎಂಟಿಸಿ ಬಸ್ ನಿಲ್ದಾಣದಿಂದ ತಮಿಳುನಾಡು ಮತ್ತು ಆಂಧ್ರಪ್ರದೇಶ ಕಡೆಗೆ ವಿಶೇಷ ಬಸ್‌ಗಳ  ಕಾರ್ಯಾಚರಣೆ ಇರಲಿವೆ.
ವಿಜಯನಗರ, ಜೆ.ಪಿ.ನಗರ, ಜಯನಗರ 4ನೇ ಬ್ಲಾಕ್ ಮತ್ತು 9ನೇ ಬ್ಲಾಕ್, ಜಾಲಹಳ್ಳಿ ಕ್ರಾಸ್, ನವರಂಗ್ (ರಾಜಾಜಿನಗರ), ಮಲ್ಲೇಶ್ವರ 18ನೇ ಅಡ್ಡ ರಸ್ತೆ, ಕೆಂಗೇರಿ ಉಪನಗರ ಸೇರಿದಂತೆ ವಿವಿಧ ಸ್ಥಳಗಳಿಂದ ಪ್ರಯಾಣಿಕರ ಒತ್ತಡಕ್ಕನುಗುಣವಾಗಿ ಶಿವಮೊಗ್ಗ, ದಾವಣಗೆರೆ, ತಿರುಪತಿ, ಮಂಗಳೂರು, ಕುಂದಾಪುರ, ಶೃಂಗೇರಿ, ಹೊರನಾಡು, ಕುಕ್ಕೆಸುಬ್ರಹ್ಮಣ್ಯ ಮತ್ತು ಧರ್ಮಸ್ಥಳಕ್ಕೆ ಹೆಚ್ಚುವರಿ ಸಾರಿಗೆ ವ್ಯವಸ್ಥೆ ಕಲ್ಪಿಸಲಾಗುತ್ತದೆ.

ಈಶಾನ್ಯ ಕರ್ನಾಟಕ ಹಾಗೂ ವಾಯವ್ಯ ಕರ್ನಾಟಕದ ಪ್ರದೇಶಗಳಿಗೆ ಮುಂಗಡ ಕಾಯ್ದಿರಿಸದ ವಿಶೇಷ ಸಾರಿಗೆಗಳನ್ನು ಮೆಜೆಸ್ಟಿಕ್‌ ಬಸ್ ನಿಲ್ದಾಣದಿಂದಲೇ ಕಾರ್ಯಾಚರಣೆ ಮಾಡಲಾಗುತ್ತದೆ ಎಂದು ಪ್ರಕಟಣೆ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.