ADVERTISEMENT

ಮಹಿಳಾ ಕಾರ್ಮಿಕರಿಗೆ ಪ್ರತ್ಯೇಕ ಬಸ್

​ಪ್ರಜಾವಾಣಿ ವಾರ್ತೆ
Published 17 ಸೆಪ್ಟೆಂಬರ್ 2014, 19:47 IST
Last Updated 17 ಸೆಪ್ಟೆಂಬರ್ 2014, 19:47 IST

ಬೆಂಗಳೂರು: ‘ನಗರದಲ್ಲಿರುವ ಗಾರ್ಮೆಂಟ್ಸ್‌ ಮಹಿಳಾ ಕಾರ್ಮಿಕರೂ ಸೇರಿದಂತೆ ಮಹಿಳಾ ಕಾರ್ಮಿಕರಿಗಾಗಿ ಪ್ರತ್ಯೇಕ ಬಸ್ ವ್ಯವಸ್ಥೆ ಮಾಡಲು ಪ್ರಕ್ರಿಯೆ ಆರಂಭವಾಗಿದೆ’ ಎಂದು ಸಾರಿಗೆ  ಹಾಗೂ ಕಾರ್ಮಿಕ ಇಲಾಖೆ-ಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಪಿ.ಬಿ.ರಾಮಮೂರ್ತಿ ತಿಳಿಸಿದರು.

ನಗರದಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಈ ಸಂಬಂಧ ಕಾರ್ಮಿಕ ಇಲಾಖೆ, ಕೆಎಸ್‌ಆರ್‌ಟಿಸಿ, ಬಿಎಂಟಿಸಿ ಹಾಗೂ ಗಾರ್ಮೆಂಟ್ಸ್‌ ಉದ್ಯಮಿಗಳ ಒಕ್ಕೂಟ ಜತೆಗೂಡಿ ಸಮೀಕ್ಷೆ ಆರಂಭಿಸಿದ್ದು, ಒಂದು ತಿಂಗಳಲ್ಲಿ ಸಮೀಕ್ಷೆ ಪೂರ್ಣಗೊಳ್ಳಲಿದೆ’ ಎಂದು ವಿಶ್ವಾಸ ವ್ಯಕ್ತಪಡಿಸಿದರು. ರಾಜ್ಯದಲ್ಲಿ ಗಾರ್ಮೆಂಟ್ಸ್‌ ಉದ್ಯಮದಲ್ಲಿ 2.78 ಲಕ್ಷ ಮಹಿಳಾ ಕಾರ್ಮಿಕರಿದ್ದಾರೆ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.