ADVERTISEMENT

ಮೂರು ದಿನಗಳಲ್ಲಿ ಪ್ರಾಯೋಗಿಕ ಸಂಚಾರ ಆರಂಭ

​ಪ್ರಜಾವಾಣಿ ವಾರ್ತೆ
Published 24 ಮಾರ್ಚ್ 2017, 20:48 IST
Last Updated 24 ಮಾರ್ಚ್ 2017, 20:48 IST
ಮೂರು ದಿನಗಳಲ್ಲಿ ಪ್ರಾಯೋಗಿಕ ಸಂಚಾರ ಆರಂಭ
ಮೂರು ದಿನಗಳಲ್ಲಿ ಪ್ರಾಯೋಗಿಕ ಸಂಚಾರ ಆರಂಭ   

ಬೆಂಗಳೂರು: ಉತ್ತರ–ದಕ್ಷಿಣ ಕಾರಿಡಾರ್‌ನಲ್ಲಿ ಸಂಪಿಗೆ ರಸ್ತೆ ನಿಲ್ದಾಣದಿಂದ ನ್ಯಾಷನಲ್‌ ಕಾಲೇಜು ನಿಲ್ದಾಣದವರೆಗಿನ ಸುರಂಗ ಮಾರ್ಗದಲ್ಲಿ  ಮೂರು ದಿನಗಳ ಒಳಗೆ ಮೆಟ್ರೊ  ರೈಲಿನ ಪ್ರಾಯೋಗಿಕ ಸಂಚಾರ ಆರಂಭವಾಗಲಿದೆ.

‘ರೈಲು ಸಂಚಾರ ಆರಂಭಿಸುವುದಕ್ಕೆ ಮುನ್ನ  ನಡೆಸುವ ಎಲ್ಲ ರೀತಿಯ ತಪಾಸಣೆಗಳನ್ನು ಫ್ರೆಂಚ್‌ ಕಂಪೆನಿ ಅಲ್‌ಸ್ಟೋಮ್‌ ಕಂಪೆನಿ ಮುಗಿಸಿದೆ. ಇನ್ನು ಪ್ರಾಯೋಗಿಕ ಸಂಚಾರ ಮಾತ್ರ ಬಾಕಿ’ ಎಂದು ಬೆಂಗಳೂರು ಮೆಟ್ರೊ  ರೈಲು ನಿಗಮದ  (ಬಿಎಂಆರ್‌ಸಿಎಲ್‌)  ವ್ಯವಸ್ಥಾಪಕ ನಿರ್ದೇಶಕ ಪ್ರದೀಪ್‌ ಸಿಂಗ್‌ ಖರೋಲ ತಿಳಿಸಿದರು.

ಈ ಮಾರ್ಗಕ್ಕೆ ರೈಲ್ವೆ ಸುರಕ್ಷತಾ ಆಯುಕ್ತರಿಂದ ಪ್ರಮಾಣಪತ್ರ ಪಡೆಯುವುದಕ್ಕೆ ಮುನ್ನ ಎಷ್ಟು ದಿನಗಳ ಕಾಲ ಪ್ರಾಯೋಗಿಕ ಸಂಚಾರ ನಡೆಸಬೇಕಾಗುತ್ತದೆ ಎಂಬ ಬಗ್ಗೆ ಪ್ರತಿಕ್ರಿಯಿಸಲು ಅವರು ನಿರಾಕರಿಸಿದರು. ಈ ಕಾರಿಡಾರ್‌ನಲ್ಲಿ ಏಪ್ರಿಲ್‌ ಅಂತ್ಯದೊಳಗೆ ಪೂರ್ಣ ಪ್ರಮಾಣದಲ್ಲಿ ರೈಲು ಸಂಚಾರ ಆರಂಭಿಸಲು ನಿಗಮ ಸಿದ್ಧತೆ ನಡೆಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.