ನಗರದಲ್ಲಿ ಗುರುವಾರ ಎಲ್ಲೆಡೆ ಹೋಳಿ ಹಬ್ಬದ ರಂಗು. ವಿದ್ಯಾರ್ಥಿಗಳು ಪರಸ್ಪರ ಬಣ್ಣ ಹಚ್ಚುವ ಮೂಲಕ ರಂಗಿನ ಲೋಕದಲ್ಲಿ ಮಿಂದೆದ್ದರು. ಪ್ರಮುಖ ರಸ್ತೆಗಳಲ್ಲಿ, ಬಡಾವಣೆಗಳಲ್ಲಿ, ಕಾಲೇಜು, ಹಾಸ್ಟೆಲ್ಗಳ ಸಮೀಪ ನೆರೆದಿದ್ದ ಯುವಕ– ಯುವತಿಯರು ಬಣ್ಣದ ನೀರು ಎರಚಿ ಹಬ್ಬದ ಶುಭಾಶಯ ವಿನಿಮಯ ಮಾಡಿಕೊಂಡರು. ಕೆಲವು ಬಡಾವಣೆಗಳಲ್ಲಿ ಮಹಿಳೆಯರು ಹಾಗೂ ಪುಟಾಣಿ ಮಕ್ಕಳು ಹೋಳಿ ಹಬ್ಬದ ಸಡಗರದಲ್ಲಿ ಪಾಲ್ಗೊಂಡ ದೃಶ್ಯ ಕಂಡು ಬಂತು –ಪ್ರಜಾವಾಣಿ ಚಿತ್ರಗಳು
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.