ADVERTISEMENT

ರಸ್ತೆ ವಿಭಜಕಕ್ಕೆ ಕಾರು ಡಿಕ್ಕಿ: ಚಾಲಕ ಸಾವು

​ಪ್ರಜಾವಾಣಿ ವಾರ್ತೆ
Published 31 ಆಗಸ್ಟ್ 2015, 19:38 IST
Last Updated 31 ಆಗಸ್ಟ್ 2015, 19:38 IST
ಶ್ರೀರಂಗಪಟ್ಟಣ ತಾಲ್ಲೂಕಿನ ಗಣಂಗೂರು ಬಳಿ ಸೋಮವಾರ ಸಂಭವಿಸಿದ ರಸ್ತೆ ಅಪಘಾತದಲ್ಲಿ ಗಾಯಗೊಂಡ ಮಹಿಳೆಗೆ ಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಯಿತು
ಶ್ರೀರಂಗಪಟ್ಟಣ ತಾಲ್ಲೂಕಿನ ಗಣಂಗೂರು ಬಳಿ ಸೋಮವಾರ ಸಂಭವಿಸಿದ ರಸ್ತೆ ಅಪಘಾತದಲ್ಲಿ ಗಾಯಗೊಂಡ ಮಹಿಳೆಗೆ ಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಯಿತು   

ಶ್ರೀರಂಗಪಟ್ಟಣ: ರಸ್ತೆ ವಿಭಜಕಕ್ಕೆ ಕಾರು ಡಿಕ್ಕಿ ಹೊಡೆದ ಪರಿಣಾಮ ಚಾಲಕ ಮೃತಪಟ್ಟು, ಆತನ ಪತ್ನಿ ಗಾಯ ಗೊಂಡಿ ರುವ ಘಟನೆ ತಾಲ್ಲೂಕಿನ ಗಣಂಗೂರು ಬಳಿ ಸೋಮವಾರ ನಡೆದಿದೆ.

ಬೆಂಗಳೂರಿನ ವಿಲ್ಸನ್‌ ಗಾರ್ಡನ್‌ ನಿವಾಸಿ ಜಹಾಂಗೀರ್‌ ಸೇಟ್‌ (35) ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆ ಮೃತಪಟ್ಟಿದ್ದಾರೆ. ಘಟನೆಯಲ್ಲಿ ತೀವ್ರ ಗಾಯಗೊಂಡಿರುವ ಸೇಟ್‌ ಅವರ ಪತ್ನಿ ನಿಲೂಫರ್‌ ಸೇಟ್‌ ಅವರಿಗೆ ಪಟ್ಟಣದ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿ, ಹೆಚ್ಚಿನ ಚಿಕಿತ್ಸೆಗಾಗಿ ಮೈಸೂರಿಗೆ ಸಾಗಿಸಲಾಗಿದೆ.

ಕಾರಿನಲ್ಲಿದ್ದ ಇಬ್ಬರು ಮಕ್ಕಳು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಮೈಸೂರಿನಿಂದ ಬೆಂಗಳೂರು ಕಡೆ ತೆರಳುತ್ತಿದ್ದ ಕಾರು ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದು ಬಲಭಾಗದ ರಸ್ತೆಗೆ ಬಿದ್ದಿದೆ. ಆ ಸಂದರ್ಭದಲ್ಲಿ ಮಂಡ್ಯದ ಕಡೆ ಯಿಂದ ಮೈಸೂರಿಗೆ ತೆರಳುತ್ತಿದ್ದ ಲಾರಿ ಕಾರಿಗೆ ಡಿಕ್ಕಿ ಹೊಡೆಯಿತು ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದರು.

ಪ್ರತಿಭಟನೆ: ರಸ್ತೆ ಉಬ್ಬು ಇಲ್ಲದ ಕಾರಣ ಅಪಘಾತಗಳು ನಡೆಯುತ್ತಿದ್ದು, ರಸ್ತೆ ಉಬ್ಬು ನಿರ್ಮಿಸಬೇಕು ಎಂದು ಆಗ್ರಹಿಸಿ ಸ್ಥಳೀಯರು ಸುಮಾರು 40 ನಿಮಿಷ ಪ್ರತಿಭಟನೆ ನಡೆಸಿದರು. ಬೆಂಗಳೂರು– ಮೈಸೂರು ಹೆದ್ದಾರಿ ತಡೆದು ಆಕ್ರೋಶ ವ್ಯಕ್ತಪಡಿಸಿದರು. ಇದರಿಂದ ವಾಹನ ಸಂಚಾರಕ್ಕೆ ಕೆಲಕಾಲ ಅಡ್ಡಿಯಾಯಿತು. ಸ್ಥಳಕ್ಕೆ ಪೊಲೀಸರು ಬಂದು ರಸ್ತೆ ಉಬ್ಬು ನಿರ್ಮಿಸುವ ಭರವಸೆ ನೀಡಿದ್ದರಿಂದ ವಾಹನ ಸಂಚಾರ ಪುನರಾರಂ ಭಗೊಂಡಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.