ADVERTISEMENT

ರಾಘವೇಶ್ವರ ಸ್ವಾಮೀಜಿ ಬಂಧನಕ್ಕೆ ಒತ್ತಾಯ

​ಪ್ರಜಾವಾಣಿ ವಾರ್ತೆ
Published 16 ಸೆಪ್ಟೆಂಬರ್ 2014, 19:30 IST
Last Updated 16 ಸೆಪ್ಟೆಂಬರ್ 2014, 19:30 IST
ಅತ್ಯಾಚಾರ ಆರೋಪ ಎದುರಿಸುತ್ತಿರುವ ರಾಮಚಂದ್ರಾಪುರ ಮಠದ ರಾಘವೇಶ್ವರ ಭಾರತೀ ಸ್ವಾಮೀಜಿ ಅವರನ್ನು ಬಂಧಿಸಬೇಕು ಎಂದು ಒತ್ತಾಯಿಸಿ ಕಿತ್ತೂರು ರಾಣಿ ಮಹಿಳಾ ಸಂಘ ಸೇರಿದಂತೆ ವಿವಿಧ ಸಂಘಟನೆಗಳ ಸದಸ್ಯರು ನಗರದ ಆನಂದರಾವ್ ವೃತ್ತದಲ್ಲಿ ಮಂಗಳವಾರ ಪ್ರತಿಭಟನೆ ಮಾಡಿದರು
ಅತ್ಯಾಚಾರ ಆರೋಪ ಎದುರಿಸುತ್ತಿರುವ ರಾಮಚಂದ್ರಾಪುರ ಮಠದ ರಾಘವೇಶ್ವರ ಭಾರತೀ ಸ್ವಾಮೀಜಿ ಅವರನ್ನು ಬಂಧಿಸಬೇಕು ಎಂದು ಒತ್ತಾಯಿಸಿ ಕಿತ್ತೂರು ರಾಣಿ ಮಹಿಳಾ ಸಂಘ ಸೇರಿದಂತೆ ವಿವಿಧ ಸಂಘಟನೆಗಳ ಸದಸ್ಯರು ನಗರದ ಆನಂದರಾವ್ ವೃತ್ತದಲ್ಲಿ ಮಂಗಳವಾರ ಪ್ರತಿಭಟನೆ ಮಾಡಿದರು   

ಬೆಂಗಳೂರು: ಅತ್ಯಾಚಾರ ಆರೋಪ ಎದುರಿಸುತ್ತಿರುವ ರಾಮಚಂದ್ರಾಪುರ ಮಠದ ರಾಘವೇಶ್ವರ ಭಾರತೀ ಸ್ವಾಮೀಜಿ ಅವರನ್ನು ಬಂಧಿಸುವಂತೆ ಒತ್ತಾಯಿಸಿ ವಿವಿಧ ಮಹಿಳಾ ಸಂಘಟನೆ-ಗಳ ಸದಸ್ಯರು ನಗರದ ಆನಂದರಾವ್ ವೃತ್ತದಲ್ಲಿ ಮಂಗಳವಾರ ಪ್ರತಿಭಟನೆ ಮಾಡಿದರು.

ಕಿತ್ತೂರು ರಾಣಿ ಚೆನ್ನಮ್ಮ ಮಹಿಳಾ ಸಂಘ, ದಲಿತ ಮಹಿಳಾ ಒಕ್ಕೂಟ, ಹಿಂದುಳಿದ ವರ್ಗಗಳ ಮಹಿಳಾ ಕ್ರಿಯಾ ಸಮಿತಿ, ಜೀವನಾಡಿ ಸೇವಾ ಸಂಘ, ಕರ್ನಾಟಕ ರಕ್ಷಣಾ ವೇದಿಕೆ ಮಹಿಳಾ ಘಟಕ ಸೇರಿದಂತೆ ಹಲವು ಸಂಘಟನೆಗಳ ಸದಸ್ಯರು ಬೆಳಿಗ್ಗೆ 11.30ಕ್ಕೆ ಆನಂದರಾವ್ ವೃತ್ತದಲ್ಲಿ ಜಮಾಯಿಸಿ, ಸ್ವಾಮೀಜಿ ವಿರುದ್ಧ ಘೋಷಣೆ ಕೂಗಿದರು.

ಈ ವೇಳೆ ಮಾತನಾಡಿದ ಮಹಿಳಾ ಒಕ್ಕೂಟದ ಸಂಚಾಲಕಿ ಹೇಮಲತಾ, ‘ರಾಘವೇಶ್ವರ ಸ್ವಾಮೀಜಿ  ತಮ್ಮ ಪ್ರಭಾವ ಬಳಸಿ ಕಲಾವಿದೆ ಪ್ರೇಮಲತಾ ಮತ್ತು ದಿವಾಕರ ಶಾಸ್ತ್ರಿ ದಂಪತಿಯ ವಿರುದ್ಧ ಸುಳ್ಳು ದೂರು ದಾಖಲಿಸಿ-ದ್ದಾರೆ. ತಾಯಿ ಮೇಲೆ ಅತ್ಯಾಚಾರ ಎಸಗಿದ ಆರೋಪದಡಿ ಸ್ವಾಮೀಜಿ ವಿರುದ್ಧ ದಂಪತಿಯ ಮಗಳು ಸಹ ಬನ-ಶಂಕರಿ ಠಾಣೆಯಲ್ಲಿ ದೂರು ದಾಖಲಿಸಿ-ದ್ದಾರೆ.

ಆದರೆ, ದಂಪತಿಯನ್ನು ಮಾತ್ರ ಬಂಧಿಸಿರುವ ಪೊಲೀಸರು, ಸ್ವಾಮೀಜಿ ವಿರುದ್ಧ ಯಾವುದೇ ಕ್ರಮ ತೆಗೆದು-ಕೊಳ್ಳದೆ ರಕ್ಷಣೆ ನೀಡುತ್ತಿದ್ದಾರೆ’ ಎಂದು ಆರೋಪಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.