ADVERTISEMENT

ರಾಜವಂಶಸ್ಥರಿಗೆ ಗೌರವಧನ ನೀಡಿಕೆ: ಪಿಐಎಲ್‌ ವಜಾ

​ಪ್ರಜಾವಾಣಿ ವಾರ್ತೆ
Published 7 ಅಕ್ಟೋಬರ್ 2015, 19:51 IST
Last Updated 7 ಅಕ್ಟೋಬರ್ 2015, 19:51 IST

ಬೆಂಗಳೂರು: ಮೈಸೂರು ದಸರಾ ಉತ್ಸವದ ವೇಳೆಯಲ್ಲಿ ರಾಜವಂಶಸ್ಥರಾದ ದಿವಂಗತ ಶ್ರೀಕಂಠದತ್ತ ಒಡೆಯರ್‌ ಅವರ ಪತ್ನಿ ಪ್ರಮೋದಾದೇವಿ ಅವರಿಗೆ ಗೌರವಧನ ನೀಡುವ ವಿಚಾರ ಸರ್ಕಾರದ ವಿವೇಚನೆಗೆ ಬಿಟ್ಟದ್ದು ಎಂದು ಹೈಕೋರ್ಟ್‌ ಅಭಿಪ್ರಾಯಪಟ್ಟಿದೆ.

ಈ ಕುರಿತಂತೆ ಮೈಸೂರಿನ ನಿವೃತ್ತ ಪ್ರೊಫೆಸರ್‌ ಪಿ.ವಿ. ನಂಜರಾಜ ಅರಸ್‌ ಅವರು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ
ಯನ್ನು (ಪಿಐಎಲ್‌) ಹಂಗಾಮಿ ಮುಖ್ಯ ನ್ಯಾಯಮೂರ್ತಿ ಎಸ್.ಕೆ.ಮುಖರ್ಜಿ ಹಾಗೂ ನ್ಯಾಯಮೂರ್ತಿ ಬಿ.ವಿ.ನಾಗರತ್ನ ಅವರಿದ್ದ ವಿಭಾಗೀಯ ಪೀಠವು ಬುಧವಾರ ವಜಾಗೊಳಿಸಿದೆ.

‘ಮೈಸೂರು ಅರಮನೆಯ ರತ್ನಖಚಿತ ಸಿಂಹಾಸನ ಹಾಗೂ ಚಿನ್ನದ ಅಂಬಾರಿ ಯಾರ ವಶದಲ್ಲಿರಬೇಕೆಂಬುದು ಸರ್ಕಾರದ ವಿವೇಚನೆಗೆ ಬಿಟ್ಟ ವಿಷಯ. ಅಂತೆಯೇ ದಸರಾ ಮಹೋತ್ಸವದ ಸಮಯದಲ್ಲಿ ರಾಜವಂಶಸ್ಥರಿಗೆ  ಸರ್ಕಾರ ಗೌರವಧನ ನೀಡುವ ವಿಷಯದಲ್ಲಿ ಕೋರ್ಟ್‌ ಮಧ್ಯಪ್ರವೇಶಿಸಲು ಬಯಸುವುದಿಲ್ಲ. ಹೀಗಾಗಿ ನಮಗೆ ಈ ಅರ್ಜಿಯನ್ನು ವಜಾ ಮಾಡದೆ ಅನ್ಯ ಮಾರ್ಗವಿಲ್ಲ’ ಎಂದು ನ್ಯಾಯಪೀಠವು ಹೇಳಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.