ADVERTISEMENT

ರಾಜ್ಯಕ್ಕೆ ನೆರವು: ಕೇಂದ್ರ ಬದ್ಧ– ಡಿವಿಎಸ್‌

​ಪ್ರಜಾವಾಣಿ ವಾರ್ತೆ
Published 31 ಅಕ್ಟೋಬರ್ 2014, 19:44 IST
Last Updated 31 ಅಕ್ಟೋಬರ್ 2014, 19:44 IST
ಕಂಠೀರವ ಕ್ರೀಡಾಂಗಣದಲ್ಲಿ ಶುಕ್ರವಾರ ಆಯೋಜಿಸಿದ್ದ ಏಕತಾ ನಡಿಗೆ ಕಾರ್ಯಕ್ರಮದಲ್ಲಿ ಸರ್ದಾರ್‌ ವಲ್ಲಭ ಭಾಯಿ ಪಟೇಲ್‌ ಅವರ ಭಾವಚಿತ್ರಕ್ಕೆ ಕೇಂದ್ರ ರೈಲ್ವೆ ಸಚಿವ ಡಿ.ವಿ. ಸದಾನಂದ ಗೌಡ, ವಿಧಾನ ಪರಿಷತ್‌ ಸದಸ್ಯ ರಾಮಚಂದ್ರೇಗೌಡ, ಶಾಸಕ ಡಾ.ಸಿ.ಎನ್‌. ಅಶ್ವತ್ಥನಾರಾಯಣ, ಸಂಸದ ಪಿ.ಸಿ.ಮೋಹನ್‌, ಸಚಿವ ಡಾ. ಎಚ್‌.ಸಿ. ಮಹದೇವಪ್ಪ, ಕ್ರೀಡಾಪಟು ರೀತ್‌ ಅಬ್ರಹಾಂ, ಕ್ರೀಡಾ ಇಲಾಖೆಯ ಕಾರ್ಯದರ್ಶಿ ಎನ್‌. ನಾಗಾಂಬಿಕಾ ದೇವಿ, ವಿಧಾನ ಪರಿಷತ್‌ ಸದಸ್ಯೆ ತಾರಾ ಅನೂರಾಧ ಪುಷ್ಪನಮನ ಸಲ್ಲಿಸಿದರು

ಬೆಂಗಳೂರು: ರಾಜ್ಯದ ಸಮಸ್ಯೆಗಳಿಗೆ ನೆರವು ನೀಡಲು ಕೇಂದ್ರ ಸರ್ಕಾರ ಸಿದ್ಧವಿದೆ. ಆದರೆ, ರಾಜ್ಯ ಸರ್ಕಾರ  ಯಾವ ಸ್ವರೂಪದ ನೆರವು ನಿರೀಕ್ಷಿಸುತ್ತಿದೆ ಎಂಬುದನ್ನು ಸ್ಪಷ್ಟಪಡಿ ಸಬೇಕು ಎಂದು ರೈಲ್ವೆ ಸಚಿವ ಡಿ.ವಿ.ಸದಾನಂದ ಗೌಡ ಹೇಳಿದರು.

ಶುಕ್ರವಾರ ಪುರಭವನದ ಬಳಿ    ಆಯೋಜಿಸಿದ್ದ ‘ರಾಷ್ಟ್ರೀಯ ಏಕತಾ ಓಟ’ದಲ್ಲಿ ಅಖಂಡತೆ ಮತ್ತು ಸಮಗ್ರತೆಯ ಪ್ರತಿಜ್ಞಾವಿಧಿ ಬೋಧಿಸಿದ ನಂತರ ಸುದ್ದಿಗಾರರ ಜತೆ ಮಾತನಾಡಿದರು. ಗೃಹ ಸಚಿವ ಕೆ.ಜೆ. ಜಾರ್ಜ್‌ ಅವರ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ‘ಜಾರ್ಜ್‌ ಅವರು ಹೇಳಿಕೆ ನೀಡುವ ಮುನ್ನ ಯೋಚಿಸಬೇಕಿತ್ತು. ಹೀಗಾಗಿ ಅವರ ಹೇಳಿಕೆಗೆ ಪ್ರತಿಕ್ರಿಯಿಸುವುದಿಲ್ಲ’ ಎಂದರು.

ಲೋಕೋಪಯೋಗಿ ಸಚಿವ ಡಾ.ಎಚ್.ಸಿ. ಮಹದೇವಪ್ಪ ಏಕತೆ ಗಾಗಿ ಓಟಕ್ಕೆ ಚಾಲನೆ ನೀಡಿದರು.  ಕ್ರೀಡಾಪಟು ಅಶ್ವಿನಿ ನಾಚಪ್ಪ, ಸಂಸದ ಪಿ.ಸಿ. ಮೋಹನ್, ಶಾಸಕರಾದ ಎಸ್. ಸುರೇಶ್‌ಕುಮಾರ್, ವಿಜಯ ಕುಮಾರ್ ಪಾಲ್ಗೊಂಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.