ಬೆಂಗಳೂರು: ಅಕ್ರಮ ಗಣಿಗಾರಿಕೆ ಆರೋಪಕ್ಕೆ ಸಂಬಂಧಿಸಿದ ಪ್ರಕರಣಗಳಲ್ಲಿ ಇತ್ತೀಚೆಗಷ್ಟೆ ನ್ಯಾಯಾಂಗ ಬಂಧನದಿಂದ ಬಿಡುಗಡೆ ಹೊಂದಿರುವ ಮಾಜಿ ಸಚಿವ ಜಿ.ಜನಾರ್ದನ ರೆಡ್ಡಿ ಮತ್ತು ಇತರೆ ಆರೋಪಿಗಳು ಮಂಗಳವಾರ ಸಿಬಿಐ ವಿಶೇಷ ನ್ಯಾಯಾಲಯಕ್ಕೆ ವಿಚಾರಣೆಗೆ ಹಾಜರಾಗಿದ್ದರು.
ಅಸೋಸಿಯೇಟೆಡ್ ಮೈನಿಂಗ್ ಕಂಪೆನಿಗೆ ಸಂಬಂಧಿಸಿದ ಪ್ರಕರಣದ ವಿಚಾರಣೆಯನ್ನು ಮಾರ್ಚ್ 7ಕ್ಕೆ ಮುಂದೂಡಿ ನ್ಯಾಯಾಲಯ ಆದೇಶ ಹೊರಡಿಸಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.