ADVERTISEMENT

ಲಾರಿ ಮಾಲೀಕರ ಸಂಘಗಳ ಒಕ್ಕೂಟದ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 28 ಜುಲೈ 2014, 20:06 IST
Last Updated 28 ಜುಲೈ 2014, 20:06 IST

ಬೆಂಗಳೂರು: ನಿಗದಿತ ಮಿತಿಗಿಂತ ಹೆಚ್ಚು ಸರಕುಗಳ ಸಾಗಣೆ ತಡೆಯಲು ಆರ್‌ಟಿಒ ಇನ್‌ಸ್ಪೆಕ್ಟರ್‌ಗಳು ಸಹಕಾರ ನೀಡುತ್ತಿಲ್ಲ ಎಂದು ಆರೋಪಿಸಿ ರಾಜ್ಯ ಲಾರಿ ಮಾಲೀಕರ ಸಂಘಗಳ ಒಕ್ಕೂಟದ ಸದಸ್ಯರು ಶೇಷಾದ್ರಿ ರಸ್ತೆಯ ಗಾಂಧಿ ಪ್ರತಿಮೆ ಎದುರು ಸೋಮವಾರ  ಪ್ರತಿಭಟನೆ ನಡೆಸಿದರು.

ಈ ವೇಳೆ ಮಾತನಾಡಿದ ಒಕ್ಕೂಟದ ಅಧ್ಯಕ್ಷ ಬಿ.ಚನ್ನಾರೆಡ್ಡಿ, ‘ಸರಕು ಸಾಗಣೆ ವಾಹನಗಳಲ್ಲಿ ನಿಗದಿತ ಮಿತಿಗಿಂತ ಹೆಚ್ಚು ಸರಕುಗಳನ್ನು ಸಾಗಣೆ ಮಾಡಬಾರದು ಎಂದು ಜುಲೈ 1ರಂದು ಒಕ್ಕೂಟದ ಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಗಿದೆ. ಇದಕ್ಕೆ ಆರ್‌ಟಿಒ ಇನ್‌ಸ್ಪೆಕ್ಟರ್‌ಗಳು ಸರಿಯಾದ  ಸಹಕಾರ ನೀಡುತ್ತಿಲ್ಲ’ ಎಂದು ದೂರಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.