ADVERTISEMENT

ಲಿಂಗಾಯತರ ಭಾವನೆಗಳ ಜತೆ ಸಿಎಂ ಚೆಲ್ಲಾಟ: ಮುರುಳೀಧರ ರಾವ್‌

​ಪ್ರಜಾವಾಣಿ ವಾರ್ತೆ
Published 21 ಮಾರ್ಚ್ 2018, 19:53 IST
Last Updated 21 ಮಾರ್ಚ್ 2018, 19:53 IST

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ವೀರಶೈವ– ಲಿಂಗಾಯತರ ಭಾವನೆಗಳೊಂದಿಗೆ ಚೆಲ್ಲಾಟವಾಡುತ್ತಿದ್ದಾರೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಪಿ.ಮುರುಳೀಧರ ರಾವ್‌ ಟೀಕಿಸಿದ್ದಾರೆ.

ವಿವೇಚನೆ ಇಲ್ಲದೆ ತೆಗೆದುಕೊಂಡಿರುವ ಈ ತೀರ್ಮಾನದಿಂದ ಕರ್ನಾಟಕ ಮಾತ್ರವಲ್ಲ ಇಡೀ ದೇಶದಲ್ಲಿ ಕಾಂಗ್ರೆಸ್‌ ಬೆಲೆ ತೆರಬೇಕಾಗುತ್ತದೆ ಎಂದು ಅವರು ಬುಧವಾರ ಮಾಧ್ಯಮಗೋಷ್ಠಿಯಲ್ಲಿ ಎಚ್ಚರಿಸಿದರು.

ವೀರಶೈವ– ಲಿಂಗಾಯತರಿಗೆ ಧಾರ್ಮಿಕ ಅಲ್ಪಸಂಖ್ಯಾತ ಸ್ಥಾನ ನೀಡುತ್ತೇವೆ ಎಂದು ಸಚಿವ ಸಂಪುಟದಲ್ಲಿ ತೆಗೆದುಕೊಂಡ ನಿರ್ಧಾರವು ಕೇವಲ ರಾಜಕೀಯ ಗಿಮಿಕ್‌ ಎಂದು ಅವರು ಹೇಳಿದರು.

ADVERTISEMENT

2013 ರಲ್ಲಿ ವೀರಶೈವ– ಲಿಂಗಾಯತರಿಗೆ ಸ್ವತಂತ್ರ ಧರ್ಮದ ಸ್ಥಾನಮಾನ ನೀಡುವಂತೆ ಅಖಿಲ ಭಾರತ ವೀರಶೈವ ಮಹಾಸಭಾ ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಿತ್ತು. ಅಂದಿನ ಯುಪಿಎ ಸರ್ಕಾರ ಮನವಿಯನ್ನು ತಿರಸ್ಕರಿಸಿತ್ತು. ಈ ವಿಚಾರದ ಅರಿವು ಇದ್ದೂ ಮುಖ್ಯಮಂತ್ರಿ ಈ ಸಮುದಾಯಕ್ಕೆ ಹುಸಿ ಭರವಸೆಗಳನ್ನು ನೀಡಿ ಅವರ ಭಾವನೆಗಳ ಜೊತೆ ಚೆಲ್ಲಾಟವಾಡುತ್ತಿದೆ. ಇಲ್ಲದ ಆಸೆಗಳನ್ನು ಹುಟ್ಟಿಸಿ ಮೋಸ ಮಾಡಿದೆ ಎಂದು ಅವರು ಟೀಕಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.