ADVERTISEMENT

ಲಿಷಾಗೆ ಉದ್ಯೋಗ: ಸಮಯ ಕೇಳಿದ ರಾಜ್ಯ ಸರ್ಕಾರ

​ಪ್ರಜಾವಾಣಿ ವಾರ್ತೆ
Published 20 ಜುಲೈ 2017, 19:54 IST
Last Updated 20 ಜುಲೈ 2017, 19:54 IST

ಬೆಂಗಳೂರು: ಬಾಂಬ್‌ ಸ್ಫೋಟದ ಗಾಯಾಳು ಲಿಷಾಗೆ ಸರ್ಕಾರಿ ನೌಕರಿ ನೀಡಲು ಹತ್ತು ದಿನಗಳ ಕಾಲಾವಕಾಶ ಬೇಕು’ ಎಂದು ರಾಜ್ಯ ಸರ್ಕಾರ ಹೈಕೋರ್ಟ್‌ಗೆ ಮನವಿ ಮಾಡಿದೆ.

ಈ ಕುರಿತಂತೆ ಲಿಷಾ ಸಲ್ಲಿಸಿರುವ ನ್ಯಾಯಾಂಗ ನಿಂದನೆ ಮೊಕದ್ದಮೆಯನ್ನು ನ್ಯಾಯಮೂರ್ತಿಗಳಾದ ಜಯಂತ್‌ ಪಟೇಲ್‌ ಹಾಗೂ ಎಸ್.ಸುಜಾತ ಅವರಿದ್ದ ವಿಭಾಗೀಯ ನ್ಯಾಯಪೀಠ ಗುರುವಾರ ವಿಚಾರಣೆ ನಡೆಸಿತು.

ವಿಚಾರಣೆ ವೇಳೆ ಹೆಚ್ಚುವರಿ ಅಡ್ವೊಕೇಟ್ ಜನರಲ್ ಎ.ಎಸ್‌. ಪೊನ್ನಣ್ಣ  ಅವರು, ‘10 ದಿನ ಸಮಯ ನೀಡಿದರೆ ಉದ್ಯೋಗ ನೀಡಿಕೆ ಕುರಿತಂತೆ ಕೋರ್ಟ್‌ಗೆ ವಿವರ ಒದಗಿಸಲಾಗುವುದು’ ಎಂದರು.

ADVERTISEMENT

ಆಗಸ್ಟ್‌ 1ಕ್ಕೆ ವಿಚಾರಣೆ ಮುಂದೂಡಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.