ADVERTISEMENT

ಲೋಕಾಯುಕ್ತ ತನಿಖೆಗೆ ಒತ್ತಾಯ

ಅಕ್ರಮ ಕಲ್ಲು ಗಣಿಗಾರಿಕೆ

​ಪ್ರಜಾವಾಣಿ ವಾರ್ತೆ
Published 20 ಸೆಪ್ಟೆಂಬರ್ 2014, 19:30 IST
Last Updated 20 ಸೆಪ್ಟೆಂಬರ್ 2014, 19:30 IST

ಬೆಂಗಳೂರು: ಉತ್ತರ ಕರ್ನಾಟಕ ಮತ್ತು ಹೈದರಾಬಾದ್‌ ಕರ್ನಾಟಕ ಭಾಗದಲ್ಲಿ ನಡೆಯುತ್ತಿರುವ ಅಕ್ರಮ ಕಲ್ಲು ಗಣಿ­ಗಾರಿಕೆ ಕುರಿತು ಲೋಕಾಯುಕ್ತ ತನಿಖೆ ನಡೆಸಬೇಕು ಎಂದು ಅಖಿಲ ಭಾರತ ಭ್ರಷ್ಟಾಚಾರ ನಿರ್ಮೂಲನಾ ಸಮಿತಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಸಲ್ಲಿಸಿದೆ.

ಬಾಗಲಕೋಟೆ, ಯಾದಗಿರಿ, ರಾಯ­ಚೂರು, ಕೊಪ್ಪಳ ಜಿಲ್ಲೆಗಳಲ್ಲಿ ನಡೆಯು­ತ್ತಿರುವ ಅಕ್ರಮ ಕಲ್ಲು ಗಣಿಗಾರಿಕೆ­ಯಿಂದ ಸರ್ಕಾರದ ಬೊಕ್ಕಸಕ್ಕೆ ಕೋಟ್ಯಂತರ ರೂಪಾಯಿ ನಷ್ಟವಾಗು­ತ್ತಿದೆ. ಈ ಅಕ್ರಮಕ್ಕೆ ಕಾರಣರಾದ ಅಧಿಕಾರಿಗಳ ವಿರುದ್ಧ ಲೋಕಾಯುಕ್ತ ಪೊಲೀಸರು ಇತ್ತೀಚೆಗೆ ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡಿದ್ದರು. ಆದರೆ ಅಕ್ರಮ ಮುಂದುವರಿದಿದೆ ಎಂದು ಸಮಿತಿ ಉಪಾಧ್ಯಕ್ಷ ಅಣ್ಣಾಜಿರಾವ ಕೋರೆ­ನವರ ಮತ್ತು ಪ್ರಧಾನ ಕಾರ್ಯದರ್ಶಿ ನಾಗರಾಜ ಎಸ್‌. ಹೊಂಗಲ ಸಲ್ಲಿಸಿರುವ ಮನವಿಯಲ್ಲಿ ದೂರಲಾಗಿದೆ.

‘ಲೂಟಿ ಮಂಡಳಿ’: ರಾಜ್ಯ ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ (ಕೆಎಸ್‌ಪಿಸಿಬಿ) ‘ಕರ್ನಾಟಕ ಹಣಕಾಸು ಲೂಟಿ ಮಂಡಳಿ’ ಆಗಿದೆ. ಕೈಗಾರಿಕೆ ಸ್ಥಾಪನೆಗೆ ಸಂಬಂಧಿಸಿದಂತೆ ತಾನು ರೂಪಿಸಿದ ಮಾರ್ಗದರ್ಶಿ ಸೂತ್ರಗಳನ್ನು ಮಂಡಳಿ ಪಾಲಿಸುತ್ತಿಲ್ಲ. ಮಂಡಳಿಯನ್ನು ರದ್ದು ಮಾಡಬೇಕು ಎಂದು ಸಮಿತಿ ಮುಖ್ಯಮಂತ್ರಿಯವರನ್ನು ಒತ್ತಾಯಿಸಿದೆ. ರಾಜ್ಯಪಾಲ ವಜುಭಾಯಿ ವಾಲಾ ಅವರಿಗೂ ಮನವಿ ಸಲ್ಲಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.