ADVERTISEMENT

ವಸತಿ ಯೋಜನೆ: ತಿಂಗಳಲ್ಲಿ ಹಣ

​ಪ್ರಜಾವಾಣಿ ವಾರ್ತೆ
Published 24 ಜುಲೈ 2014, 20:08 IST
Last Updated 24 ಜುಲೈ 2014, 20:08 IST

ಬೆಂಗಳೂರು: ಬಸವ, ಆಶ್ರಯ ಸೇರಿದಂತೆ ವಿವಿಧ ವಸತಿ ಯೋಜನೆಗಳ ಫಲಾನುಭವಿಗಳಿಗೆ ತಿಂಗಳೊಳಗೆ ಹಣ ಪಾವತಿ ಮಾಡಲಾಗುವುದು ಎಂದು ವಸತಿ ಸಚಿವ ಅಂಬರೀಷ್‌ ತಿಳಿಸಿದರು.  ವಿಧಾನ ಪರಿಷತ್‌ನಲ್ಲಿ ಗುರುವಾರ ನಿಯಮ 330ರ ಅಡಿಯಲ್ಲಿ ಬಿಜೆಪಿ ಸದಸ್ಯರ ಗಮನ ಸೆಳೆಯುವ ಸೂಚನೆಗೆ ಅವರು ಉತ್ತರ ನೀಡಿದರು.

ಗ್ರಾಮೀಣ ಪ್ರದೇಶದಲ್ಲಿ ಅರ್ಹ ಫಲಾನುಭವಿಗಳನ್ನು ಗುರುತಿಸಲು ಆರು ತಿಂಗಳಲ್ಲಿ ಸಮೀಕ್ಷೆ ನಡೆಸಲಾ ಗುವುದು ಎಂದು ಅವರು ತಿಳಿಸಿದರು.

‘ಕಡುಬಡವರಿಗೆ ಮನೆಗಳು  ಮಂಜೂರಾಗಿವೆ. ಹಣ ಮಂಜೂ ರಾಗದ ಕಾರಣ 3.15 ಲಕ್ಷ ಮನೆಗಳ ಕಾಮಗಾರಿ ಅರ್ಧಕ್ಕೆ ನಿಂತಿದೆ’ ಎಂದು ವಿರೋಧ ಪಕ್ಷದ ನಾಯಕ ಕೆ.ಎಸ್‌. ಈಶ್ವರಪ್ಪ, ಸದಸ್ಯರಾದ ಕೋಟ ಶ್ರೀನಿವಾಸ ಪೂಜಾರಿ, ಬಿ.ಜೆ.ಪುಟ್ಟ­ಸ್ವಾಮಿ  ದೂರಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.