ADVERTISEMENT

ವಾಟ್ಸ್‌ಆ್ಯಪ್‌ ಸಂದೇಶ ಕಳುಹಿಸಿ ಯುವಕ ಆತ್ಮಹತ್ಯೆ

​ಪ್ರಜಾವಾಣಿ ವಾರ್ತೆ
Published 24 ಮೇ 2018, 20:07 IST
Last Updated 24 ಮೇ 2018, 20:07 IST

ಬೆಂಗಳೂರು: ಪರಿಚಯಸ್ಥ ಯುವತಿಗೆ ವಾಟ್ಸ್‌ಆ್ಯಪ್‌ನಲ್ಲಿ ಸಂದೇಶ ಕಳುಹಿಸಿ ಕೆವಿನ್ ಫೆಡರಿಕ್ (21) ಎಂಬುವರು ಗುರುವಾರ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ನಗರದ ಕಾಲೇಜೊಂದರಲ್ಲಿ ಹೋಟೆಲ್‌ ಮ್ಯಾನೇಜ್‌ಮೆಂಟ್‌ ಕೋರ್ಸ್‌ ಮಾಡುತ್ತಿದ್ದ ಅವರು, ಭಾರತಿನಗರದ ತಿಮ್ಮಯ್ಯ ರಸ್ತೆಯಲ್ಲಿ ವಾಸವಿದ್ದರು.

ಆತ್ಮಹತ್ಯೆಗೂ ಮುನ್ನ ಕೆವಿನ್‌, ಯುವತಿಯೊಂದಿಗೆ ಚಾಟಿಂಗ್‌ ಮಾಡಿದ್ದರು. ತಾವು ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಸಂದೇಶ ಕಳುಹಿಸಿದ್ದರು. ಅದಕ್ಕೆ  ಯುವತಿ, ‘ಐ ಡೋಂಟ್ ಮೈಂಡ್’ ಎಂದಿದ್ದರು.

ADVERTISEMENT

ಆ ನಂತರ ಅವರು, ಫ್ಯಾನ್‌ಗೆ ಹಗ್ಗ ಕಟ್ಟಿ ಅದರ ಚಿತ್ರವನ್ನೂ ಯುವತಿಗೆ ಕಳುಹಿಸಿದ್ದರು. ಅದಕ್ಕೆ ಪ್ರತಿಕ್ರಿಯೆ ಬಾರದಿದ್ದಾಗ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಭಾರತಿನಗರ ಪೊಲೀಸರು ತಿಳಿಸಿದರು.

ಘಟನಾ ಸ್ಥಳದಲ್ಲಿ ಮೊಬೈಲ್‌ ಸಿಕ್ಕಿದೆ. ಅದರಲ್ಲಿ ಸಂದೇಶಗಳಿದ್ದು, ಪ್ರೀತಿ ವಿಚಾರವಾಗಿ ಆತ್ಮಹತ್ಯೆ ಮಾಡಿಕೊಂಡಿರುವ ಅನುಮಾನವಿದೆ. ಸದ್ಯ ಬೌರಿಂಗ್ ಆಸ್ಪತ್ರೆಯಲ್ಲಿ ಶವ ಇರಿಸಲಾಗಿದೆ ಎಂದು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.