ADVERTISEMENT

ವಾಹನ ನಿಲುಗಡೆ ನಿರ್ಬಂಧ

​ಪ್ರಜಾವಾಣಿ ವಾರ್ತೆ
Published 23 ಮೇ 2016, 19:36 IST
Last Updated 23 ಮೇ 2016, 19:36 IST

ಬೆಂಗಳೂರು: ನಗರದ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಮಂಗಳವಾರ (ಮೇ 24) ಐಪಿಎಲ್ ಕ್ರಿಕೆಟ್ ಪಂದ್ಯ ನಡೆಯಲಿರುವ ಕಾರಣ ಕ್ರೀಡಾಂಗಣದ ಸುತ್ತಮುತ್ತಲ ರಸ್ತೆಗಳಲ್ಲಿ ಮಧ್ಯಾಹ್ನ 2 ಗಂಟೆಯಿಂದ ರಾತ್ರಿ 11.30ರವರೆಗೆ ವಾಹನ ನಿಲುಗಡೆ ನಿರ್ಬಂಧಿಸಲಾಗಿದೆ.

ಕ್ವೀನ್ಸ್ ರಸ್ತೆಯ ಸಿ.ಟಿ.ಒ ವೃತ್ತದಿಂದ ಕ್ವೀನ್ಸ್ ವೃತ್ತ, ಎಂ.ಜಿ.ರಸ್ತೆಯ ಅನಿಲ್ ಕುಂಬ್ಳೆ ವೃತ್ತದಿಂದ ಕ್ವೀನ್ಸ್ ವೃತ್ತ, ಲಿಂಕ್ ರಸ್ತೆಯಿಂದ ಕಬ್ಬನ್ ರಸ್ತೆ, ರಾಜಭವನ ರಸ್ತೆ, ಟಿ. ಟೌಡಯ್ಯ ರಸ್ತೆ, ರೇಸ್‌ ಕೋರ್ಸ್ ರಸ್ತೆ,  ಸೆಂಟ್ರಲ್ ಸ್ಟ್ರೀಟ್, ಕಬ್ಬನ್ ರಸ್ತೆಯ ಬಿ.ಆರ್.ವಿ ವೃತ್ತದಿಂದ ಡಿಕನ್ಸನ್ ರಸ್ತೆ ಜಂಕ್ಷನ್‌ವರೆಗೆ ಮತ್ತು ಕ್ರೀಡಾಂಗಣದ ಕಾಂಪೌಂಡ್‌ಗೆ ಹೊಂದಿಕೊಂಡಂತಿರುವ ರಸ್ತೆಯ ಎರಡೂ ಬದಿಯಲ್ಲಿ ವಾಹನ ನಿಲುಗಡೆಗೆ ಅವಕಾಶವಿಲ್ಲ.

ಕಬ್ಬನ್ ರಸ್ತೆಯ ಕಾಮರಾಜ ರಸ್ತೆ ಜಂಕ್ಷನ್‌ನಿಂದ ಡಿಕನ್ಸನ್ ರಸ್ತೆ ಜಂಕ್ಷನ್‌ವರೆಗೆ ಬಿಎಂಟಿಸಿ ಬಸ್‌ಗಳನ್ನು ಹೊರತುಪಡಿಸಿ ಇತರೆ ಎಲ್ಲ ವಾಹನಗಳ ನಿಲುಗಡೆ ನಿರ್ಬಂಧಿಸಲಾಗಿದೆ.

ಸೇಂಟ್‌ ಮಾರ್ಕ್ಸ್‌ ರಸ್ತೆಯ ಎಸ್.ಬಿ.ಐ ವೃತ್ತದಿಂದ ಆಶೀರ್ವಾದಂ ವೃತ್ತದವರೆಗೆ, ಸೇಂಟ್‌ ಮಾರ್ಕ್ಸ್‌ ರಸ್ತೆ, ಕಸ್ತೂರಬಾ ರಸ್ತೆಯ ಕ್ವೀನ್ಸ್ ವೃತ್ತದಿಂದ ಹಡ್ಸನ್ ವೃತ್ತದವರೆಗಿನ ರಸ್ತೆಯಲ್ಲಿ ವಾಹನ ನಿಲ್ಲಿಸುವಂತಿಲ್ಲ. 

ಕಬ್ಬನ್ ಉದ್ಯಾನದ ಒಳಗೆ, ಕಿಂಗ್ ರಸ್ತೆ, ಪ್ರೆಸ್‌ಕ್ಲಬ್ ಹಾಗೂ ಬಾಲಭವನ ಮುಂಭಾಗದ ರಸ್ತೆ, ವಿಠಲ್ ಮಲ್ಯ ಆಸ್ಪತ್ರೆ ರಸ್ತೆಯಲ್ಲಿ ಬಿಷಪ್ ಕಾಟನ್ ಬಾಲಕಿಯರ ಶಾಲೆವರೆಗೆ ವಾಹನ ನಿಲುಗಡೆ ಸಂಪೂರ್ಣ ನಿರ್ಬಂಧಿಸಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.

ಎಲ್ಲೆಲ್ಲಿ ನಿಲುಗಡೆಗೆ ಅವಕಾಶ?
ಸೇಂಟ್ ಜೋಸೆಫ್ ಇಂಡಿಯನ್ ಪ್ರೌಢಶಾಲೆ ಮೈದಾನ, ಯು.ಬಿ. ಸಿಟಿ,  ಶಿವಾಜಿನಗರ ಟಿಟಿಎಂಸಿ ಬಸ್ ನಿಲ್ದಾಣದ ಒಂದನೇ ಮಹಡಿಯಲ್ಲಿ ವಾಹನ ನಿಲುಗಡೆಗೆ ಅವಕಾಶ ಕಲ್ಪಿಸಲಾಗಿದೆ  ಎಂದು ಪೊಲೀಸರು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.