ADVERTISEMENT

‘ವಿಜ್ಞಾನ ವಿದ್ಯಾರ್ಥಿಗಳಿಗೆ ಐಐಎಸ್‌ಸಿ ಗೊತ್ತಿಲ್ಲ’

​ಪ್ರಜಾವಾಣಿ ವಾರ್ತೆ
Published 11 ಜನವರಿ 2017, 19:43 IST
Last Updated 11 ಜನವರಿ 2017, 19:43 IST
‘ವಿಜ್ಞಾನ ವಿದ್ಯಾರ್ಥಿಗಳಿಗೆ ಐಐಎಸ್‌ಸಿ ಗೊತ್ತಿಲ್ಲ’
‘ವಿಜ್ಞಾನ ವಿದ್ಯಾರ್ಥಿಗಳಿಗೆ ಐಐಎಸ್‌ಸಿ ಗೊತ್ತಿಲ್ಲ’   

ಬೆಂಗಳೂರು: ‘ನಮ್ಮ ಪಿಯುಸಿ ಹಾಗೂ ಪದವಿ ಕಾಲೇಜುಗಳ ವಿಜ್ಞಾನ ವಿದ್ಯಾರ್ಥಿಗಳಿಗೆ ಭಾರತೀಯ ವಿಜ್ಞಾನ ಸಂಸ್ಥೆಯ (ಐಐಎಸ್‌ಸಿ) ಬಗ್ಗೆಯೇ ಗೊತ್ತಿಲ್ಲ’ ಎಂದು ವಿಶ್ರಾಂತ ಕುಲಪತಿ ಪ್ರೊ.ಕೆ. ಸಿದ್ದಪ್ಪ ಬೇಸರ ವ್ಯಕ್ತಪಡಿಸಿದರು.

ಬಿ.ಇಡಿ ಕಾಲೇಜುಗಳ ಉಪನ್ಯಾಸಕರಿಗಾಗಿ ಬೆಂಗಳೂರು ವಿಶ್ವವಿದ್ಯಾಲಯ ಬುಧವಾರ ಆಯೋಜಿಸಿದ್ದ ‘ಐಸಿಟಿ (ಮಾಹಿತಿ ಮತ್ತು ಸಂವಹನ ತಂತ್ರಜ್ಞಾನ) ಆಧಾರಿತ ಶಿಕ್ಷಣ’ ಕಾರ್ಯಾಗಾರ ಉದ್ಘಾಟಿಸಿ ಅವರು ಮಾತನಾಡಿದರು.

‘ಈ ವಿದ್ಯಾರ್ಥಿಗಳು ವಿಜ್ಞಾನಿಗಳಾಗುವ ಕನಸು ಕಾಣುವುದಿಲ್ಲ. ಎಂಜಿನಿಯರ್‌ ಹಾಗೂ ವೈದ್ಯರಾಗಬೇಕು ಎಂಬ ಗುರಿಯಿಂದ ಅಧ್ಯಯನ ಮಾಡುತ್ತಾರೆ. ಉಪನ್ಯಾಸಕರು ಹಾಗೂ ಪೋಷಕರ ಮನೋಭಾವವೂ ಅದಕ್ಕೆ ತಕ್ಕಂತೆ ಇದೆ’ ಎಂದು ಅವರು ಬೇಸರ ವ್ಯಕ್ತಪಡಿಸಿದರು. ‘ಬಿ.ಇಡಿ ಶಿಕ್ಷಕರಿಗೆ ಐಸಿಟಿ ಬಗ್ಗೆ ಮಾಹಿತಿ ಇದೆ. ಆದರೆ, ಅವರಿಗೆ ತರಬೇತಿ ಕೊರತೆ ಇದೆ’ ಎಂದು ಅವರು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.