ಬೆಂಗಳೂರು: ನಗರದ ಎಲೆಕ್ಟ್ರಾನಿಕ್ ಸಿಟಿಯಲ್ಲಿ ಭಾನುವಾರ ನಡೆದ ‘ಸ್ಪಿರಿಟ್ ಆಫ್ ವಿಪ್ರೊ ರನ್ 2014’ ಮ್ಯಾರಥಾನ್ನಲ್ಲಿ ಸುಮಾರು 20 ಸಾವಿರ ಮಂದಿ ಪಾಲ್ಗೊಂಡಿದ್ದರು.
ಸಾಫ್ಟ್ವೇರ್ ಕಂಪೆನಿ ವಿಪ್ರೊ ಲಿಮಿಟೆಡ್ ವತಿಯಿಂದ ಆಯೋಜಿಸಿದ್ದ ಈ ಮ್ಯಾರಥಾನ್ನಲ್ಲಿ ಕಂಪೆನಿಯ
ಉದ್ಯೋಗಿಗಳು, ಅವರ ಕುಟುಂಬ ಸದಸ್ಯರು ಹಾಗೂ ಗ್ರಾಹಕರು ಭಾಗವಹಿಸಿದ್ದರು.
ಐದು ಕಿ.ಮೀ, 10 ಕಿ.ಮೀ ಹಾಗೂ 21 ಕಿ.ಮೀ ಹೀಗೆ ಮೂರು ವಿಭಾಗಗಳಲ್ಲಿ ನಡೆದ ಮ್ಯಾರಥಾನ್ನಲ್ಲಿ ಜಯ ಗಳಿಸಿದವರಿಗೆ ನಗದು ಬಹುಮಾನ ನೀಡಲಾಯಿತು.
ಕಂಪೆನಿಯು ಇದೇ ರೀತಿ ಹೈದರಾಬಾದ್, ಪುಣೆ, ಚೆನ್ನೈ ಸೇರಿದಂತೆ ಜಗತ್ತಿನ 110 ನಗರಗಳಲ್ಲಿ ಭಾನುವಾರ ಆಯೋಜಿಸಿದ್ದ ಮ್ಯಾರಥಾನ್ನಲ್ಲಿ ಸುಮಾರು 63 ಸಾವಿರ ಮಂದಿ ಭಾಗವಹಿಸಿದ್ದರು ಎಂದು ಪ್ರಕಟಣೆ ತಿಳಿಸಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.