ADVERTISEMENT

ವಿಭಜನೆಯ ನಿರ್ಧಾರ ಕೈಬಿಡಲು ಒತ್ತಾಯ

​ಪ್ರಜಾವಾಣಿ ವಾರ್ತೆ
Published 28 ಜನವರಿ 2015, 20:07 IST
Last Updated 28 ಜನವರಿ 2015, 20:07 IST

ಬೆಂಗಳೂರು: ‘ಬೆಂಗಳೂರು ನಗರವು ತನ್ನದೇ ಆದ ಐತಿಹಾಸಿಕ ಪರಂಪರೆ ಹೊಂದಿದೆ.  ಬಿಬಿಎಂಪಿ ವಿಭಜನೆ ಮಾಡು­­­ವುದರಿಂದ ಅದು ತನ್ನ ಮಹತ್ವವನ್ನು ಕಳೆದುಕೊಳ್ಳುತ್ತದೆ. ಹೀಗಾಗಿ, ಸರ್ಕಾರವು ವಿಭಜನೆಯ ನಿರ್ಧಾರವನ್ನು ಕೈಬಿಡಬೇಕು’ ಎಂದು ರಾಜ್ಯ ಒಕ್ಕಲಿಗರ ಸಂಘದ ಅಧ್ಯಕ್ಷ ಡಾ.ಅಪ್ಪಾಜಿಗೌಡ ಒತ್ತಾಯಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ‘ಸರ್ಕಾರವು ಕೇವಲ ಐಎಎಸ್‌ ಹುದ್ದೆಗಳ ಸಂಖ್ಯೆಯನ್ನು ಹೆಚ್ಚಿಸುವ ಉದ್ದೇಶದಿಂದ ಪಾಲಿಕೆಯನ್ನು ವಿಭಜನೆ ಮಾಡಲು ಮುಂದಾಗಿದೆ. ವಿಭಜನೆಯ ಪರಿಣಾಮ ಪಾಲಿಕೆ ಯೋಜನೆಗಳು ಅಸ್ತವ್ಯಸ್ತವಾಗುತ್ತವೆ ಹಾಗೂ ಪಾಲಿಕೆ ಕೈಗೊಂಡಿರುವ ಕಾಮಗಾರಿಗಳು ಅರ್ಧಕ್ಕೆ ನಿಂತು ಸಾರ್ವಜನಿಕರ ಹಣ ಪೋಲಾಗುತ್ತದೆ’ ಎಂದರು.

‘ಪಾಲಿಕೆಯ ವಿಭಜನೆ ಪರೋಕ್ಷವಾಗಿ ಅಖಂಡ ಕರ್ನಾಟಕದ ಏಕತೆಗೆ ಧಕ್ಕೆಯಾಗಿದ್ದು, ಮುಂದೊಂದು ದಿನ ಉತ್ತರ ಕರ್ನಾಟಕ ಮತ್ತು ದಕ್ಷಿಣ ಕರ್ನಾಟಕ ಎಂದು ಪ್ರತ್ಯೇಕ ರಾಜ್ಯ ವಿಭಜನೆಗೆ ಪ್ರೇರಣೆ ನೀಡಿದಂತಾಗುತ್ತದೆ’ ಎಂದು ಹೇಳಿದರು.

‘ವಿಭಜನೆ ಕೈಬಿಟ್ಟು, ಪಾಲಿಕೆಯಲ್ಲಿ ನಡೆಯುತ್ತಿರುವ ಅವ್ಯವಹಾರ ತಡೆಗಟ್ಟಿ ಸಧೃಡಗೊಳಿಸಬೇಕು ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.