ADVERTISEMENT

ವಿಷಯುಕ್ತ ಸಿಹಿ ತಿಂಡಿ ಸೇವನೆ: 20 ಮಕ್ಕಳು ಅಸ್ವಸ್ಥ

​ಪ್ರಜಾವಾಣಿ ವಾರ್ತೆ
Published 25 ಏಪ್ರಿಲ್ 2017, 20:23 IST
Last Updated 25 ಏಪ್ರಿಲ್ 2017, 20:23 IST
ವಿಷಯುಕ್ತ ಸಿಹಿ ತಿಂಡಿ ಸೇವಿಸಿ ಅಸ್ವಸ್ಥಗೊಂಡ ಮಕ್ಕಳಿಗೆ ಕೆ.ಸಿ. ಜನರಲ್‌ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಯಿತು  – ಪ್ರಜಾವಾಣಿ ಚಿತ್ರ
ವಿಷಯುಕ್ತ ಸಿಹಿ ತಿಂಡಿ ಸೇವಿಸಿ ಅಸ್ವಸ್ಥಗೊಂಡ ಮಕ್ಕಳಿಗೆ ಕೆ.ಸಿ. ಜನರಲ್‌ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಯಿತು – ಪ್ರಜಾವಾಣಿ ಚಿತ್ರ   

ಬೆಂಗಳೂರು: ವಿಷಯುಕ್ತ ಸಿಹಿ ತಿಂಡಿ ತಿಂದು ಸಂಜಯ್‌ ಗಾಂಧಿ ನಗರದ 20 ಮಕ್ಕಳು ಹಾಗೂ ಮೂವರು ಮಹಿಳೆಯರು ಮಂಗಳವಾರ ರಾತ್ರಿ ಅಸ್ವಸ್ಥರಾಗಿದ್ದು, ಕೆ.ಸಿ. ಜನರಲ್ ಆಸ್ಪತ್ರೆಗೆ ದಾಖಲಾಗಿದ್ದಾರೆ.

‘ಮಂಜುಳಾ ಎಂಬ ವೃದ್ಧೆ, ಶೇಷಾದ್ರಿಪುರ ವ್ಯಾಪ್ತಿಯ ಕಲ್ಯಾಣ ಮಂಟಪಗಳಲ್ಲಿ ಉಳಿಯುವ ಸಿಹಿ ತಿನಿಸುಗಳನ್ನು ತಂದು ಕಡಿಮೆ ಬೆಲೆಗೆ ಮಾರಾಟ ಮಾಡಿದ್ದಾರೆ. ಇದನ್ನು ತಿಂದ ಮಕ್ಕಳು ಹಾಗೂ ಮಹಿಳೆಯರಲ್ಲಿ ವಾಂತಿ ಭೇದಿ  ಉಂಟಾಗಿ ಅಸ್ವಸ್ಥಗೊಂಡಿದ್ದರು. ಇವರನ್ನು ಕೂಡಲೇ ಆಸ್ಪತ್ರೆಗೆ ಸೇರಿಸಿದೆವು. ಶ್ರೀರಾಮಪುರ ಪೊಲೀಸ್ ಠಾಣೆಗೆ ದೂರು ಕೊಟ್ಟಿದ್ದೇವೆ’ ಎಂದು ಅಸ್ವಸ್ಥ ಮಗುವೊಂದರ ಪೋಷಕ ಜೈಪಾಲ್ ‘ಪ್ರಜಾವಾಣಿ’ಗೆ ತಿಳಿಸಿದರು.

‘ಹೆಚ್ಚಿನ ಚಿಕಿತ್ಸೆಗಾಗಿ ಇಬ್ಬರು ಮಕ್ಕಳನ್ನು ಇಂದಿರಾ ಗಾಂಧಿ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ. ವಿಷಯುಕ್ತ ಸಿಹಿ ತಿನಿಸನ್ನು ಪರೀಕ್ಷೆಗೆ ಕಳುಹಿಸಲಾಗಿದೆ’ ಎಂದು ಆಸ್ಪತ್ರೆಯ ಸೂಪರಿಂಟೆಂಡೆಂಟ್ ಡಾ. ಎಚ್.ರವಿಕುಮಾರ್ ತಿಳಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.