ADVERTISEMENT

ವೃಷಣ ಕತ್ತರಿಸಿದ ಪ್ರಕರಣ: ತನಿಖೆ ಚುರುಕು

​ಪ್ರಜಾವಾಣಿ ವಾರ್ತೆ
Published 27 ಆಗಸ್ಟ್ 2014, 19:53 IST
Last Updated 27 ಆಗಸ್ಟ್ 2014, 19:53 IST

ಬೆಂಗಳೂರು: ರಿಯಲ್‌ ಎಸ್ಟೇಟ್‌ ಉದ್ಯಮಿ ಗಂಗದಾಸಪ್ಪ ಎಂಬುವರನ್ನು ಹಣಕ್ಕಾಗಿ ಅಪಹರಿಸಿ ಶಸ್ತ್ರಚಿಕಿತ್ಸೆ ಮೂಲಕ ವೃಷಣಗಳನ್ನು ತೆಗೆಸಿದ್ದ ಆರೋಪಿಗಳ ಪತ್ತೆಗೆ ಮಾಗಡಿ ಪೊಲೀಸರು ತನಿಖೆ ಚುರುಕುಗೊಳಿಸಿದ್ದಾರೆ.

ತಲೆಮರೆಸಿಕೊಂಡಿರುವ ಕವಿತಾ ಹಾಗೂ ಇತರೆ ಆರೋಪಿಗಳು ಘಟನೆ ನಂತರ ಮೊಬೈಲ್‌ ಸ್ವಿಚ್‌ ಆಫ್‌ ಮಾಡಿಕೊಂಡಿದ್ದಾರೆ. ಅವರ ಮೊಬೈಲ್‌ ಕರೆಗಳ ಬಗ್ಗೆ ಹೆಚ್ಚಿನ ಮಾಹಿತಿ ಕಲೆ ಹಾಕಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ. 

ನಗರದ ಕೆಂಪೇಗೌಡ ವೈದ್ಯಕೀಯ ವಿಜ್ಞಾನ ಸಂಸ್ಥೆಯಲ್ಲಿ (ಕಿಮ್ಸ್‌) ಚಿಕಿತ್ಸೆ ಪಡೆಯುತ್ತಿರುವ ಗಂಗದಾಸಪ್ಪ ಅವರ ಸ್ಥಿತಿ ಗಂಭೀರವಾಗಿದೆ ಎಂದು ಪೊಲೀಸರು ಹೇಳಿದ್ದಾರೆ.

ಅಂಜನಾನಗರ ಸಮೀಪದ ಗಿಡದ ಕೊನೇನಹಳ್ಳಿಯ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕಿಯಾದ ಕವಿತಾ ಅವರು ಮೂರ್‌್ನಾಲ್ಕು ಮಂದಿ ದುಷ್ಕರ್ಮಿಗಳೊಂದಿಗೆ ಸೇರಿ ಆ.4ರಂದು ಮಾಗಡಿಯಲ್ಲಿ ಗಂಗದಾಸಪ್ಪ ಅವರನ್ನು ಅಪಹರಿಸಿದ್ದರು.

ನಂತರ ಅವರಿಗೆ ಬಲವಂತವಾಗಿ ನಿದ್ರೆ ಮಾತ್ರೆ ನುಂಗಿಸಿ, ನಗರದ ಆಸ್ಪತ್ರೆಯೊಂದಕ್ಕೆ ಕರೆದೊಯ್ದು ಶಸ್ತ್ರಚಿಕಿತ್ಸೆ ಮೂಲಕ ಎರಡೂ ವೃಷಣಗಳನ್ನು ತೆಗೆಸಿದ್ದನ್ನು ಇಲ್ಲಿ ಸ್ಮರಿಸಬಹುದು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.