ADVERTISEMENT

ವೈದ್ಯರ ಬೇಡಿಕೆ ಈಡೇರಿಕೆ: ಆ.15ರ ಗಡುವು

​ಪ್ರಜಾವಾಣಿ ವಾರ್ತೆ
Published 29 ಜುಲೈ 2014, 20:19 IST
Last Updated 29 ಜುಲೈ 2014, 20:19 IST

ಬೆಂಗಳೂರು: ‘ಆರೋಗ್ಯ ಇಲಾಖೆಯು ಪ್ರತಿ ಜಿಲ್ಲಾ ಆಸ್ಪತ್ರೆ ಗಳಲ್ಲಿ ಪ್ರತಿಯೊಂದು ವಿಭಾಗದಲ್ಲಿ ಒಬ್ಬ  ತಜ್ಞ ವೈದ್ಯ ಮಾತ್ರ ಇರಬೇಕು ಎಂದು ಸರ್ಕಾರ ಹೊರಡಿಸಿರುವ     ಆದೇಶವನ್ನು  ಕೂಡಲೇ ಹಿಂಪಡೆಯಬೇಕು’ ಎಂದು ಕರ್ನಾ ಟಕ ರಾಜ್ಯ ಸರ್ಕಾರಿ ವೈದ್ಯಾಧಿಕಾರಿಗಳ ಸಂಘವು ಒತ್ತಾ ಯಿಸಿದೆ.

ನಗರದಲ್ಲಿ ಪತ್ರಿಕಾಗೋಷ್ಠಿಯಲ್ಲಿ  ಸಂಘದ ಅಧ್ಯಕ್ಷ  ಡಾ.ಟಿ.ಎ. ವೀರಭದ್ರಯ್ಯ ಮಾತನಾಡಿ,  ‘ಆ.15ರ ಒಳಗೆ  ನಮ್ಮ ಬೇಡಿಕೆಗಳನ್ನು ಈಡೇರಿಸದಿದ್ದರೆ ಮುಖ್ಯಮಂತ್ರಿಗಳ ನಿವಾಸದ ಎದುರು ಸಾಮೂಹಿಕವಾಗಿ ರಾಜೀನಾಮೆ ನೀಡಲಿದ್ದೇವೆ’ ಎಂದು ಎಚ್ಚರಿಕೆ ನೀಡಿದರು.

‘ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಶೇ 60ರಷ್ಟು ತಜ್ಞ ವೈದ್ಯರ ಹುದ್ದೆಗಳು ಖಾಲಿ ಇದ್ದರೂ, ನೇಮಕಾತಿ ಪ್ರಕ್ರಿಯೆಗೆ ಚಾಲನೆ ನೀಡದೆ, ಇರುವ ವೈದ್ಯರನ್ನೇ ಹಂಚುವ ಕೆಲಸ ಮಾಡುತ್ತಿದ್ದಾರೆ.  ಆರೋಗ್ಯ ಇಲಾಖೆಯ ಆಯುಕ್ತರ  ನೇತೃತ್ವದಲ್ಲಿ  ಇಂಡಿಯನ್ ಪಬ್ಲಿಕ್ ಹೆಲ್ತ್ ಸ್ಟ್ಯಾಂಡರ್ಡ್ (ಐಪಿಎಚ್ಎಸ್) ಸಮಿತಿಯ ಆದೇಶದ ಪ್ರಕಾರ ತಾಲ್ಲೂಕು ಆಸ್ಪತ್ರೆ ಮತ್ತು  ಜಿಲ್ಲಾಸ್ಪತ್ರೆಗಳಲ್ಲಿ ಇರುವ ವೈದ್ಯ ಹುದ್ದೆಗಳಿಗೆ ಮಂಜೂರಾಗಿದ್ದ 6088 ಹುದ್ದೆಗಳಿಂದ 2000 ಹುದ್ದೆಗಳಿಗೆ ಕಡಿತಗೊಳಿಸಲಾಗಿದೆ. ಈ  ಆದೇಶವನ್ನು ಕೂಡಲೇ ಹಿಂಪಡೆಯಬೇಕು’ ಎಂದು ಆಗ್ರಹಿಸಿದರು.

‘ಆಹಾರ ಸುರಕ್ಷತಾ ವ್ಯಾಪ್ತಿಯಲ್ಲಿ ಬರುವ ಅಂಕಿತ ಹುದ್ದೆಗಳಲ್ಲಿ ಐಎಎಸ್ ಮತ್ತು ಕೆಎಎಸ್ ಅಧಿಕಾರಿಗಳಿದ್ದು, ಅವರುಗಳು ಬದಲಿಗೆ ಆರೋಗ್ಯ ಇಲಾಖೆಯಲ್ಲಿರುವ ದಕ್ಷ ವೈದ್ಯಾಧಿಕಾರಿಗಳನ್ನೇ ನೇಮಕ ಮಾಡಬೇಕು. ರಾಷ್ಟ್ರೀಯ ಆರೋಗ್ಯ ನೀತಿಯ ಪ್ರಕಾರ  30 ಸಾವಿರ ಜನಸಂಖ್ಯೆಗೆ ಒಂದು ಪ್ರಾಥಮಿಕ ಆರೋಗ್ಯ ಕೇಂದ್ರ ಇರಬೇಕು. ಆದರೆ ರಾಜ್ಯದಲ್ಲಿ ಒಂದು ಅಥವಾ ಎರಡು ಸಾವಿರ ಜನಸಂಖ್ಯೆಗೆ ಆರೋಗ್ಯ ಕೇಂದ್ರವಿದೆ.  ಪ್ರತಿ ಆರೋಗ್ಯ ಕೇಂದ್ರಕ್ಕೆ ಪ್ರಸ್ತುತ ಒಬ್ಬ ವೈದ್ಯಾಧಿಕಾರಿ ಕಾರ್ಯನಿರ್ವಹಿಸುತ್ತಿದ್ದು, ಈ ಸಂಖ್ಯೆಯನ್ನು ದ್ವಿಗುಣಗೊಳಿಸಬೇಕು ಎಂದು ಒತ್ತಾಯಿಸಿದರು.
‘ವೈದ್ಯರ ವರ್ಗಾವಣೆಯಲ್ಲಿ ಅಮೂಲಾಗ್ರ ಬದಲಾವಣೆ ತರಬೇಕು ಹಾಗೂ ಆರೋಗ್ಯ ಮತ್ತು ಕುಟುಂಬ  ಇಲಾಖೆಯ ಪ್ರಧಾನ ಕಾರ್ಯದರ್ಶಿಗಳನ್ನು ತಕ್ಷಣವೇ ವರ್ಗಾಯಿಸಿ ಆ ಸ್ಥಾನಕ್ಕೆ  ದಕ್ಷ ಐಎಎಸ್ ಅಧಿಕಾರಿಯನ್ನು ನೇಮಕ ಮಾಡ ಬೇಕು’  ಆದೇಶಿಸಿದರು.

‘ಮುಂದಿನ ದಿನಗಳಲ್ಲಿ ಪ್ರತಿ ಜಿಲ್ಲೆಯಲ್ಲಿರುವ ಸಂಘದ ಪದಾಧಿಕಾರಿಗಳನ್ನು ಭೇಟಿ ಮಾಡಿ ಆಯಾ ಜಿಲ್ಲೆಯ ಉಸ್ತು ವಾರಿ ಸಚಿವರಿಗೆ ಮನವಿ ಸಲ್ಲಿಸಲಾಗುವುದು’ ಎಂದು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.