ADVERTISEMENT

ವೈದ್ಯರ ವಿರುದ್ಧ ಕ್ರಮದ ಎಚ್ಚರಿಕೆ

​ಪ್ರಜಾವಾಣಿ ವಾರ್ತೆ
Published 9 ಮೇ 2017, 19:38 IST
Last Updated 9 ಮೇ 2017, 19:38 IST

ಬೆಂಗಳೂರು: ಸರ್ಕಾರಿ ಆಸ್ಪತ್ರೆ ವೈದ್ಯರು ಜನರಿಕ್‌ ಅಲ್ಲದ ಬೇರೆ ಬ್ರ್ಯಾಂಡ್‌ಗಳ ಔಷಧ ಖರೀದಿಸಲು ಸೂಚಿಸಿದರೆ ಕ್ರಮ ಕೈಗೊಳ್ಳಲಾಗುವುದು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಆಯಕ್ತರು ಎಚ್ಚರಿಕೆ ನೀಡಿದ್ದಾರೆ.

ಜಿಲ್ಲಾ ಕುಟುಂಬ ಕಲ್ಯಾಣಾಧಿಕಾರಿಗಳು, ಜಿಲ್ಲಾ ಶಸ್ತ್ರ ಚಿಕಿತ್ಸಕರು ಮತ್ತು ಪ್ರಮುಖ ಸರ್ಕಾರಿ ಆಸ್ಪತ್ರೆಗಳಿಗೆ ಈ ಸಂಬಂಧ ಸುತ್ತೋಲೆ ಹೊರಡಿಸಿದ್ದಾರೆ.

ಸರ್ಕಾರಿ ಆಸ್ಪತ್ರೆಗಳ ವೈದ್ಯರು ರೋಗಿಗಳಿಗೆ ಪ್ರತ್ಯೇಕ ಬ್ರ್ಯಾಂಡ್‌ ಔಷಧಿಗಳನ್ನು ಖರೀದಿಸಲು ಒತ್ತಾಯಿಸುತ್ತಿರುವ ಬಗ್ಗೆ ದೂರು ಬಂದಿದೆ  ಎಂದು ತಿಳಿಸಿದ್ದಾರೆ.

ADVERTISEMENT

ಸರ್ಕಾರವು ಜನೌಷಧಿ, ಜನಸಂಜೀವಿನಿ ಆಂದೋಲನದಡಿ ಸಾರ್ವಜನಿಕರಿಗೆ ಉತ್ತಮ ಗುಣಮಟ್ಟದ ಔಷಧಿಗಳನ್ನು ಅತಿ ಕಡಿಮೆ ಬೆಲೆಗೆ ಪೂರೈಸುತ್ತಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.