ADVERTISEMENT

ಶಾಲಾ ವಾಹನ ಮಾರ್ಗಸೂಚಿ: ವಿವರಣೆಗೆ ಸೂಚನೆ

​ಪ್ರಜಾವಾಣಿ ವಾರ್ತೆ
Published 28 ಜನವರಿ 2015, 20:06 IST
Last Updated 28 ಜನವರಿ 2015, 20:06 IST

ಬೆಂಗಳೂರು: ಶಾಲಾ ಮಕ್ಕಳನ್ನು ಕರೆದೊ­ಯ್ಯುವ ವಾಹನಗಳು ಎಷ್ಟರ­ಮಟ್ಟಿಗೆ  ಸುಪ್ರೀಂ ಕೋರ್ಟ್‌ ಮಾರ್ಗಸೂಚಿ ಪಾಲನೆ ಮಾಡುತ್ತಿವೆ ಎಂಬುದರ ಕುರಿತು ಪ್ರಮಾಣ ಪತ್ರ ಸಲ್ಲಿಸುವಂತೆ ಶಿಕ್ಷಣ ಇಲಾಖೆಗೆ ಹೈಕೋರ್ಟ್ ಸೂಚಿಸಿದೆ. ಹಿರಿಯ ನ್ಯಾಯಮೂರ್ತಿ ಕೆ.ಎಲ್‌. ಮಂಜುನಾಥ್‌ ಹಾಗೂ ನ್ಯಾಯ­ಮೂರ್ತಿ ಎಸ್‌.ಸುಜಾತಾ ಅವ­ರಿದ್ದ ವಿಭಾಗೀಯ ಪೀಠವು ಈ ಕುರಿತಂತೆ ಬುಧವಾರ ಮೌಖಿಕ ಸೂಚನೆ ನೀಡಿತು.

ರಾಜ್ಯದಲ್ಲಿರುವ ಒಟ್ಟು ಶಾಲೆ­ಗಳೆಷ್ಟು? ಈ ಶಾಲೆಗಳ ಮಕ್ಕಳ ಸುರಕ್ಷತೆಗೆ ಯಾವ್ಯಾವ ಮಾರ್ಗ­ಸೂಚಿ­ಗಳನ್ನು ರಚಿಸಲಾಗಿದೆ?  ೧೭ ವರ್ಷಕ್ಕಿಂತ ಹಳೆಯದಾದ ಶಾಲಾ ವಾಹನಗಳೆಷ್ಟು? ಅವುಗಳಿಗೆ ವೇಗ ನಿಯಂತ್ರಕಗಳನ್ನು ಅಳವಡಿಸಲಾಗಿದೆಯೇ ಎಂಬಿತ್ಯಾದಿ ಕುರಿತು ವಿವರಣೆ ನೀಡಿ ಎಂದು ಪೀಠವು ಹೇಳಿದೆ.

‘ರಾಜ್ಯ ಸರ್ಕಾರವು ಶಾಲಾ ಮಕ್ಕಳ ವಾಹನ ಸುರಕ್ಷತೆಗೆ ಸಂಬಂಧಿಸಿದಂತೆ ಮಾರ್ಗಸೂಚಿಗಳ ರಚನೆ ಮಾಡಿಲ್ಲ’ ಎಂದು ಆರೋಪಿಸಿ ಹೈಕೋರ್ಟ್‌ ವಕೀಲ ಎನ್‌.ಪಿ. ಅಮೃತೇಶ್ ಅವರು ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ವೇಳೆ ನ್ಯಾಯಪೀಠವು ಈ ವಿವರಣೆ ಬಯಸಿತು.

Lok Sabha Elections Results 2024 |ನರೇಂದ್ರ ಮೋದಿ ಅವರ 'ವಿಕಸಿತ ಭಾರತ' ಅಥವಾ ರಾಹುಲ್ ಗಾಂಧಿ ಅವರ ಇಂಡಿಯಾ ಐಕ್ಯ ಭಾರತ? ಜಗತ್ತಿನ ಅತಿದೊಡ್ಡ ಪ್ರಜಾಪ್ರಭುತ್ವದ 18ನೇ ಲೋಕಸಭೆಗೆ ನಡೆದ ಚುನಾವಣೆ ಫಲಿತಾಂಶದ ಕ್ಷಣ ಕ್ಷಣದ ಮಾಹಿತಿ, ವಿಶ್ವಾಸಾರ್ಹ ವಿಶ್ಲೇಷಣೆ, ಅಂಕಿ ಅಂಶಗಳಿಗಾಗಿ ಪ್ರಜಾವಾಣಿ ನೋಡಿ. ಇದರ ಜೊತಗೆ, ಆಂಧ್ರಪ್ರದೇಶ ಮತ್ತು ಒಡಿಶಾ ವಿಧಾನಸಭೆ ಚುನಾವಣೆಯ ಫಲಿತಾಂಶವೂ ಇಲ್ಲೇ ಲಭ್ಯ. ಪ್ರಜಾವಾಣಿಯನ್ನು ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಫಾಲೋ ಮಾಡಲು ಮರೆಯದಿರಿ.