ADVERTISEMENT

ಶಾಶ್ವತ ನೀರಾವರಿ: 18ಕ್ಕೆ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 14 ಮಾರ್ಚ್ 2017, 19:41 IST
Last Updated 14 ಮಾರ್ಚ್ 2017, 19:41 IST

ಬೆಂಗಳೂರು: ‘ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಶಾಶ್ವತ ಕುಡಿಯುವ ನೀರಿನ ಸೌಲಭ್ಯವನ್ನು ಒದಗಿಸುವಂತೆ ಒತ್ತಾಯಿಸಿ ಕನ್ನಡ ಒಕ್ಕೂಟದ ವತಿಯಿಂದ ಮಾ.18 ರಂದು ಮೈಸೂರು ಬ್ಯಾಂಕ್ ವೃತ್ತದ ಬಳಿ ಪ್ರತಿಭಟನೆ ನಡೆಯಲಿದೆ’ ಎಂದು ಒಕ್ಕೂಟದ ಅಧ್ಯಕ್ಷ ವಾಟಾಳ್ ನಾಗರಾಜ್ ತಿಳಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ರಾಜ್ಯದಲ್ಲಿ ಕುಡಿಯುವ ನೀರಿಗಾಗಿ ಹಾಹಾಕಾರ ಉಂಟಾಗಿದೆ. ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ  1 ಸಾವಿರ ಅಡಿ ಕೊಳವೆ ಬಾವಿ ಕೊರೆದರೂ ಕುಡಿಯಲು ಯೋಗ್ಯ  ನೀರು ಸಿಗುತ್ತಿಲ್ಲ. ಈ ಪ್ರದೇಶದಲ್ಲಿ ಕೆರೆಗಳೂ ಬತ್ತಿಹೋಗಿವೆ. ಪಶುಗಳಿಗೆ ಮೇವು, ನೀರು ಸಿಗುತ್ತಿಲ್ಲ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT