ADVERTISEMENT

ಶಿಕ್ಷಕಿಯರಿಗೆ ಕನಿಷ್ಠ ವೇತನಕ್ಕೆ ಆಗ್ರಹಿಸಿ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 20 ಅಕ್ಟೋಬರ್ 2014, 19:30 IST
Last Updated 20 ಅಕ್ಟೋಬರ್ 2014, 19:30 IST
ಅಂಗನವಾಡಿ ಕೇಂದ್ರಗಳಲ್ಲಿ ಸುಮಂಗಲಿ ಸೇವಾಶ್ರಮ ಅಡಿ ಕೆಲಸ ಮಾಡುತ್ತಿರುವ ನೌಕರರಿಗೆ ಕನಿಷ್ಠ ವೇತನ ನೀಡಬೇಕು ಎಂದು ಒತ್ತಾಯಿಸಿ ರಾಜ್ಯ ಅಂಗನವಾಡಿ ನೌಕರರ ಸಂಘದ ಸದಸ್ಯರು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕರ ಕಚೇರಿ ಎದುರು ಸೋಮವಾರ ಪ್ರತಿಭಟನೆ ನಡೆಸಿದರು

ಬೆಂಗಳೂರು: ಅಂಗನವಾಡಿ ಕೇಂದ್ರಗ ಳಲ್ಲಿ  ಸುಮಂಗಲಿ ಸೇವಾಶ್ರಮದ ಯೋಜನೆ ಅಡಿ  ಕಾರ್ಯನಿರ್ವ ಹಿಸುತ್ತಿರುವ ಶಿಕ್ಷಕಿಯರು ಹಾಗೂ ಸಹಾಯಕಿಯರಿಗೆ ಕನಿಷ್ಠ ವೇತನ ನೀಡಬೇಕು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ರಾಜ್ಯ ಅಂಗನವಾಡಿ ನೌಕರರ ಸಂಘದ ಸದಸ್ಯರು ಸೋಮವಾರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕರ ಕಚೇರಿ ಎದುರು ಸೋಮವಾರ ಪ್ರತಿಭಟನೆ ನಡೆಸಿದರು.

ಈ ವೇಳೆ ಸಂಘ ಅಧ್ಯಕ್ಷೆ ಶಾಂತಮ್ಮ ಮಾತನಾಡಿ, ‘ಸುಮಂ ಗಲಿ ಸೇವಾಶ್ರಮದ ಅಡಿಯಲ್ಲಿ ಕೆಲಸ ಮಾಡುತ್ತಿರುವ ಅಂಗನವಾಡಿ ನೌಕರರಿಗೆ ನಿವೃತ್ತಿ ವೇನತ ನೀಡಬೇಕು. ಕಾರ್ಯಕರ್ತೆಯರಿಗೆ  10 ಸಾವಿರ ಮತ್ತು ಸಹಾಯಕಿಯರಿಗೆ 5 ಸಾವಿರ ಕನಿಷ್ಠ ವೇತನ ನಿಗದಿಪಡಿಸಬೇಕು’ ಎಂದು ಮನವಿ ಮಾಡಿದರು. ‘ರಾಜ್ಯದಲ್ಲಿ ಸುಮಂಗಲಿ ಸೇವಾಶ್ರಮದ ಅಧೀನದಲ್ಲಿರುವ 175 ಅಂಗನವಾಡಿ ಕೇಂದ್ರಗಳಲ್ಲಿ 350 ಮಂದಿ ಶಿಕ್ಷಕಿಯರು ಹಾಗೂ ಸಹಾಯಕಿಯರು ಕಾರ್ಯ ನಿರ್ವಹಿಸುತ್ತಿದ್ದಾರೆ. ಸರ್ಕಾರ ಕೂಡಲೇ ಆ ಅಂಗವನಾಡಿಗಳನ್ನು ವಾಪಸ್ಸು ಪಡೆಯ ಬೇಕು’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.