ADVERTISEMENT

‘ಶಿವಾಜಿ ನಗರದಲ್ಲಿ ಅಕ್ರಮ ಕಸಾಯಿ ಖಾನೆಗಳಿಲ್ಲ’

​ಪ್ರಜಾವಾಣಿ ವಾರ್ತೆ
Published 21 ಸೆಪ್ಟೆಂಬರ್ 2017, 19:54 IST
Last Updated 21 ಸೆಪ್ಟೆಂಬರ್ 2017, 19:54 IST

ಬೆಂಗಳೂರು: ‘ಶಿವಾಜಿನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಯಾವುದೇ ಅಕ್ರಮ ಕಸಾಯಿ ಖಾನೆ ಕಾರ್ಯ ನಿರ್ವಹಿಸುತ್ತಿಲ್ಲ’ ಎಂದು ರಾಜ್ಯ ಸರ್ಕಾರ ಹೈಕೋರ್ಟ್‌ಗೆ ತಿಳಿಸಿದೆ.

ಈ ಕುರಿತ ವರದಿಯನ್ನು ಪ್ರಾಸಿಕ್ಯೂಷನ್‌ನ ಪರ ವಕೀಲ ಸಂದೇಶ್ ಚೌಟ, ನ್ಯಾಯಮೂರ್ತಿ ಅರವಿಂದ ಕುಮಾರ್ ಅವರಿದ್ದ ಏಕಸದಸ್ಯ ನ್ಯಾಯಪೀಠಕ್ಕೆ ಸಲ್ಲಿಸಿದ್ದಾರೆ.

‘ಬೆಂಗಳೂರು ನಗರದಲ್ಲಿ 27 ಅಕ್ರಮ ಕಸಾಯಿಖಾನೆ ಕಾರ್ಯ ನಿರ್ವಹಿಸುತ್ತಿವೆ’ ಎಂದು ಗೋ ಜ್ಞಾನ ಪ್ರತಿಷ್ಠಾನ ಇತ್ತೀಚೆಗೆ ನ್ಯಾಯಮೂರ್ತಿ ಅರವಿಂದ ಕುಮಾರ್ ಅವರಿದ್ದ ಏಕಸದಸ್ಯ ನ್ಯಾಯಪೀಠಕ್ಕೆ ವರದಿ ಸಲ್ಲಿಸಿತ್ತು. ಇದನ್ನು ಪರಿಗಣಿಸಿದ್ದ ನ್ಯಾಯಪೀಠವು, ‘ಅಕ್ರಮ ಕಸಾಯಿಖಾನೆಗಳನ್ನು ಗುರುತಿಸಿ ಅವುಗಳ ವಿರುದ್ಧ ಕೈಗೊಂಡ ಕ್ರಮಗಳ ಕುರಿತಂತೆ ವರದಿ ಸಲ್ಲಿಸಿ’ ಎಂದು ಪ್ರಾಸಿಕ್ಯೂಷನ್‌ಗೆ ನಿರ್ದೇಶಿಸಿತ್ತು.

ADVERTISEMENT

‘ರಾಜ್ಯದಲ್ಲಿ ಎಲ್ಲೆಲ್ಲಿ ಅಕ್ರಮ ಕಸಾಯಿ ಖಾನೆಗಳಿವೆ ಎಂಬುದರ ಬಗ್ಗೆ ಮಾಹಿತಿ ಇದ್ದರೆ ಆ ಸ್ಥಳಗಳ ಪರಿಶೀಲನೆ ನಡೆಸಿ ನ್ಯಾಯಾಲಯಕ್ಕೆ ವರದಿ ಸಲ್ಲಿಸಿ’ ಎಂದೂ ನ್ಯಾಯಪೀಠ ಗೋ ಜ್ಞಾನ ಪ್ರತಿಷ್ಠಾನಕ್ಕೆ ನಿರ್ದೇಶಿಸಿದೆ. ವಿಚಾರಣೆಯನ್ನು ಅಕ್ಟೋಬರ್‌ 4ಕ್ಕೆ ಮುಂದೂಡಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.