ADVERTISEMENT

ಶುದ್ಧ ನೀರಿನ ಘಟಕ ಉದ್ಘಾಟನೆ

​ಪ್ರಜಾವಾಣಿ ವಾರ್ತೆ
Published 20 ನವೆಂಬರ್ 2017, 19:46 IST
Last Updated 20 ನವೆಂಬರ್ 2017, 19:46 IST
ಮುನಿರತ್ನ ಸ್ಥಳೀಯರಿಗೆ ನೀರಿನ ಕ್ಯಾನ್‍ಗಳನ್ನು ವಿತರಿಸಿದರು. ರಾಜ್ಯ ಭೋವಿ ಅಭಿವೃದ್ಧಿ ನಿಗಮದ ನಿರ್ದೇಶಕ ಎಂ.ಮಂಜುನಾಥ್, ಜಿ.ಡಿ.ತೇಜಸ್ವೀನಿ ಸೀತಾರಾಮಯ್ಯ, ಜಿ.ಮೋಹನ್‍ಕುಮಾರ್ ಇದ್ದರು.
ಮುನಿರತ್ನ ಸ್ಥಳೀಯರಿಗೆ ನೀರಿನ ಕ್ಯಾನ್‍ಗಳನ್ನು ವಿತರಿಸಿದರು. ರಾಜ್ಯ ಭೋವಿ ಅಭಿವೃದ್ಧಿ ನಿಗಮದ ನಿರ್ದೇಶಕ ಎಂ.ಮಂಜುನಾಥ್, ಜಿ.ಡಿ.ತೇಜಸ್ವೀನಿ ಸೀತಾರಾಮಯ್ಯ, ಜಿ.ಮೋಹನ್‍ಕುಮಾರ್ ಇದ್ದರು.   

ಬೆಂಗಳೂರು: ‘ರಾಜರಾಜೇಶ್ವರಿ ನಗರ ವ್ಯಾಪ್ತಿಯ ಎಲ್ಲ ಮನೆಗಳಿಗೂ ಕಾವೇರಿ ನೀರು ಪೂರೈಕೆಯಾಗುತ್ತಿದೆ. ಕ್ಷೇತ್ರದ ಎಲ್ಲ ಬಡಾವಣೆಗಳಲ್ಲಿ ಶುದ್ಧ ನೀರಿನ ಘಟಕ ನಿರ್ಮಿಸಲಾಗಿದೆ’ ಎಂದು ಶಾಸಕ ಮುನಿರತ್ನ ತಿಳಿಸಿದರು.

ಕೆಂಗುಂಟೆಯಲ್ಲಿ ಶುದ್ಧ ನೀರಿನ ಘಟಕ ಉದ್ಘಾಟಿಸಿ ಮಾತನಾಡಿದ ಅವರು, ‘ಅಭಿವೃದ್ಧಿಯಲ್ಲಿ ಹಿಂದುಳಿದ ಪ್ರದೇಶಗಳಲ್ಲಿ ಅನೇಕ ಅಭಿವೃದ್ಧಿ ಕಾಮಗಾರಿಗಳನ್ನು ಆರಂಭಿಸಿದ್ದೇವೆ’ ಎಂದರು.

ಪಾಲಿಕೆ ಸದಸ್ಯೆ ಜಿ.ಡಿ.ತೇಜಸ್ವಿನಿ ಸೀತಾರಾಮಯ್ಯ, ‘ನಮ್ಮ ವಾರ್ಡ್‌ ವ್ಯಾಪ್ತಿಯಲ್ಲಿನ ಎಲ್ಲ ರಸ್ತೆಗಳಿಗೆ ಡಾಂಬರೀಕರಣ ಮಾಡಲಾಗಿದೆ. ಒಳಚರಂಡಿ ಕಾಮಗಾರಿಗಳನ್ನೂ ಪೂರ್ಣಗೊಳಿಸಲಾಗಿದೆ’ ಎಂದರು.

ADVERTISEMENT

ಕೆಂಗುಂಟೆಯಲ್ಲಿ ವಾಸವಿರುವ ಅನೇಕರಿಗೆ ಶಾಸಕ ಮುನಿರತ್ನ ಮನೆಗಳ ಹಕ್ಕುಪತ್ರ ವಿತರಿಸಿದರು. ಎಂ.ಪಿ.ಎಂ. ಬಡಾವಣೆಯಲ್ಲಿ ₹ 1 ಕೋಟಿ ವೆಚ್ಚದಲ್ಲಿ ಕೈಗೊಂಡಿರುವ ಡಾಂಬರೀಕರಣ ಕಾಮಗಾರಿಗೆ ಚಾಲನೆ ನೀಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.