ADVERTISEMENT

ಶೌಚಾಲಯಕ್ಕೆ ಆಗ್ರಹಿಸಿ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 1 ಮೇ 2015, 20:15 IST
Last Updated 1 ಮೇ 2015, 20:15 IST
ಪೀಣ್ಯ ಕೈಗಾರಿಕಾ ಪ್ರದೇಶ–ನಾಗಸಂದ್ರ ನಡುವಿನ ಮೆಟ್ರೊ ಮಾರ್ಗದ ಉದ್ಘಾಟನಾ ಸಮಾರಂಭದಲ್ಲಿ ಪ್ರತಿಭಟನೆ ನಡೆಸಿದ ಮಹಿಳೆಯನ್ನು ಪೊಲೀಸರು ವಶಕ್ಕೆ ಪಡೆದರು – ಪ್ರಜಾವಾಣಿ ಚಿತ್ರ
ಪೀಣ್ಯ ಕೈಗಾರಿಕಾ ಪ್ರದೇಶ–ನಾಗಸಂದ್ರ ನಡುವಿನ ಮೆಟ್ರೊ ಮಾರ್ಗದ ಉದ್ಘಾಟನಾ ಸಮಾರಂಭದಲ್ಲಿ ಪ್ರತಿಭಟನೆ ನಡೆಸಿದ ಮಹಿಳೆಯನ್ನು ಪೊಲೀಸರು ವಶಕ್ಕೆ ಪಡೆದರು – ಪ್ರಜಾವಾಣಿ ಚಿತ್ರ   

ಬೆಂಗಳೂರು: ‘ಮೆಟ್ರೊ ನಿಲ್ದಾಣಗಳಲ್ಲಿ ಶೌಚಾಲಯ ವ್ಯವಸ್ಥೆ ಇಲ್ಲ. ಇಂತಹ ಯೋಜನೆ ನಮಗೆ ಅಗತ್ಯ ಇಲ್ಲ’ ಎಂದು ಆರೋಪಿಸಿ ಮಾಹಿತಿ ಹಕ್ಕು ಹೋರಾಟಗಾರರು ಪೀಣ್ಯ ಕೈಗಾರಿಕಾ ಪ್ರದೇಶ–ನಾಗಸಂದ್ರ ನಡುವಿನ ಮೆಟ್ರೊ ಮಾರ್ಗದ ಉದ್ಘಾಟನಾ ಸಮಾರಂಭದಲ್ಲಿ ಪ್ರತಿಭಟನೆ ನಡೆಸಿದರು.

ಕೇಂದ್ರ ನಗರಾಭವೃದ್ಧಿ ಸಚಿವ ವೆಂಕಯ್ಯ ನಾಯ್ಡು ಅವರು ಮಾತು ಆರಂಭಿಸುತ್ತಿದ್ದಂತೆ ಪ್ರತಿಭಟನೆ ಆರಂಭಿಸಿದ ಅವರು ಮೆಟ್ರೊ  ವಿರುದ್ಧ ಧಿಕ್ಕಾರ ಕೂಗಿದರು.

ಪೊಲೀಸರು ಅವರನ್ನು ವಶಕ್ಕೆ ಪಡೆದು ಬಳಿಕ ಬಿಟ್ಟರು. ‘ಮೆಟ್ರೊ ನಿಲ್ದಾಣಗಳಲ್ಲಿ ಅಗತ್ಯ ಶೌಚಾಲಯಗಳನ್ನು ನಿಗಮ ನಿರ್ಮಾಣ ಮಾಡಬೇಕು’ ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಅಧಿಕಾರಿಗಳಿಗೆ ಸೂಚಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.