ADVERTISEMENT

ಸಂಚಾರಿ ಪಶುವೈದ್ಯ ಸೇವೆ ಮಾಹಿತಿ ನೀಡಲು ಸೂಚನೆ

​ಪ್ರಜಾವಾಣಿ ವಾರ್ತೆ
Published 3 ಜೂನ್ 2015, 19:55 IST
Last Updated 3 ಜೂನ್ 2015, 19:55 IST

ಬೆಂಗಳೂರು: ‘ನಗರ ವ್ಯಾಪ್ತಿಯಲ್ಲಿ ಸಂಚಾರಿ ಪಶುವೈದ್ಯ ಆಸ್ಪತ್ರೆಗಳ ಕಾರ್ಯಾರಂಭದ  ಬಗ್ಗೆ ನಿಖರ ಮಾಹಿತಿ ನೀಡಬೇಕು’ ಎಂದು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನಿರ್ದೇಶಿಸಿದೆ.

ನಗರದಲ್ಲಿ ಸಂಚಾರಿ ಪಶುವೈದ್ಯ ಆಸ್ಪತ್ರೆ ಆರಂಭಿಸಲು ಸರ್ಕಾರ ವಿಳಂಬ ಮಾಡುತ್ತಿದೆ ಎಂದು ಆರೋಪಿಸಿ ಕ್ಯೂಪ (ಸಿಯುಪಿಎ) ಸಂಘಟನೆ ಸಲ್ಲಿಸಿದ್ದ ಅರ್ಜಿಯನ್ನು  ಹಂಗಾಮಿ ಮುಖ್ಯ ನ್ಯಾಯಮೂರ್ತಿ ಎಸ್.ಕೆ. ಮುಖರ್ಜಿ ನೇತೃತ್ವದ ವಿಭಾಗೀಯ ಪೀಠವು ಬುಧವಾರ ವಿಚಾರಣೆ ನಡೆಸಿತು.

ಮಹಿಳಾ ಕೈದಿಗಳಿಗೆ ಸೌಲಭ್ಯ ನೋಟಿಸ್‌ ಜಾರಿಗೆ ಆದೇಶ: ರಾಜ್ಯದ ಜೈಲುಗಳಲ್ಲಿರುವ ವಿಚಾರಣಾಧೀನ ಹಾಗೂ ಶಿಕ್ಷೆಗೆ ಗುರಿಯಾದ ಮಹಿಳಾ ಕೈದಿಗಳು, ಅವರ ಮಕ್ಕಳು ಮತ್ತು ಗರ್ಭಿಣಿಯರಿಗೆ ಸೂಕ್ತ ಸೌಲಭ್ಯ ಕಲ್ಪಿಸುವ ವಿಚಾರಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಸರ್ಕಾರಕ್ಕೆ ನೋಟಿಸ್‌ ಜಾರಿ ಮಾಡಲು ಹೈಕೋರ್ಟ್‌ ಆದೇಶಿಸಿದೆ. ಈ ಕುರಿತಂತೆ ಹೈಕೋರ್ಟ್ ರಿಜಿಸ್ಟ್ರಾರ್ ಜನರಲ್ ಅವರು ದಾಖಲಿಸಿರುವ ಸ್ವಯಂ ಪ್ರೇರಿತ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಹಂಗಾಮಿ ಮುಖ್ಯ ನ್ಯಾಯಮೂರ್ತಿ ಎಸ್‌.ಕೆ.ಮುಖರ್ಜಿ ನೇತೃತ್ವದ ವಿಭಾಗೀಯ ಪೀಠವು, ಬುಧವಾರ ವಿಚಾರಣೆ ನಡೆಸಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.