ADVERTISEMENT

ಸಂಸದೆ ಶೋಭಾ ಹೇಳಿಕೆಗೆ ಮಹಿಳಾ ಕಾಂಗ್ರೆಸ್‌ ಖಂಡನೆ

​ಪ್ರಜಾವಾಣಿ ವಾರ್ತೆ
Published 4 ಅಕ್ಟೋಬರ್ 2015, 19:45 IST
Last Updated 4 ಅಕ್ಟೋಬರ್ 2015, 19:45 IST

ಬೆಂಗಳೂರು: ‘ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿರುವ ಸಂಸದೆ ಶೋಭಾ ಕರಂದ್ಲಾಜೆಯವರು ಕ್ಷಮೆಯಾಚಿಸಬೇಕು’ ಎಂದು ಮಹಿಳಾ ಕಾಂಗ್ರೆಸ್‌ ಅಧ್ಯಕ್ಷೆ ಲಕ್ಷ್ಮೀ ಹೆಬ್ಬಾಳ್ಕರ್‌ ಆಗ್ರಹಿಸಿದ್ದಾರೆ.

ಶನಿವಾರ ನಂಜನಗೂಡಿನ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಶೋಭಾ ಅವರು, ‘ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರಧಾನಿ ನರೇಂದ್ರ ಮೋದಿಯವರ ಒಂದು ಕೂದಲಿಗೂ ಸಮವಲ್ಲ’ ಎಂಬ ಹೇಳಿಕೆ ನೀಡಿದ್ದರು. ‘ಶೋಭಾ ಅವರು ಬಿಜೆಪಿ ನಾಯಕರನ್ನು ಮೆಚ್ಚಿಸುವ ಸಲುವಾಗಿ ಮುಖ್ಯಮಂತ್ರಿಗಳ ವಿರುದ್ಧ ಹಗುರ ಹೇಳಿಕೆಗಳನ್ನು ನೀಡುತ್ತಿದ್ದಾರೆ. ಅವರ ಹೇಳಿಕೆಯನ್ನು ಮಹಿಳಾ ಕಾಂಗ್ರೆಸ್‌ ಸಮಿತಿ ಉಗ್ರವಾಗಿ ಖಂಡಿಸುತ್ತದೆ’ ಎಂದು ಅವರು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.