ADVERTISEMENT

ಸಾಲ ಸೌಲಭ್ಯಕ್ಕೆ ಅರ್ಜಿ ಆಹ್ವಾನ

​ಪ್ರಜಾವಾಣಿ ವಾರ್ತೆ
Published 3 ಮೇ 2016, 19:58 IST
Last Updated 3 ಮೇ 2016, 19:58 IST

ಬೆಂಗಳೂರು: ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ದಿ ನಿಗಮದ ವತಿಯಿಂದ ಹಿಂದುಳಿದ ವರ್ಗಗಳ ಜನರ ಆರ್ಥಿಕ ಅಭಿವೃದ್ಧಿಗಾಗಿ ವಿವಿಧ ಯೊಜನೆಗಳಡಿ 2016–17ನೇ ಸಾಲಿನಲ್ಲಿ ಸಾಲ-ಸೌಲಭ್ಯ ಪಡೆಯಲು ಅರ್ಜಿ ಆಹ್ವಾನಿಸಲಾಗಿದೆ.

ಚೈತನ್ಯ ಸಬ್ಸಿಡಿ ಯೋಜನೆ, ಅರಿವು-ಶೈಕ್ಷಣಿಕ ನೇರ ಸಾಲ ಯೋಜನೆ, ವಿದೇಶಿ ವಿಶ್ವವಿದ್ಯಾಲಯಗಳಲ್ಲಿ ಉನ್ನತ ವ್ಯಾಸಂಗ ಮಾಡುತ್ತಿರುವ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ ಬಡ್ಡಿ ರಹಿತ ಸಾಲ ಯೋಜನೆ, ಡಿ.ದೇವರಾಜ ಅರಸು ಸ್ವಯಂ ಉದ್ಯೋಗ ವೈಯಕ್ತಿಕ ಸಾಲ ಯೋಜನೆ.

ಕಿರುಸಾಲ ಯೋಜನೆ, ಸಾಂಪ್ರದಾಯಿಕ ಕುಶಲಕರ್ಮಿಗಳು ಮತ್ತು ವೃತ್ತಿ ಕಸುಬುದಾರರಿಗೆ ಸಾಲ ಸೌಲಭ್ಯದ ಯೋಜನೆ, ಗಂಗಾ-ಕಲ್ಯಾಣ ಯೋಜನೆ,  ಸ್ವಯಂ ಉದ್ಯೋಗ ಕೈಗೊಳ್ಳಲು ಆರ್ಥಿಕ ನೆರವು, ವೈಯಕ್ತಿಕ ಕೊಳವೆಬಾವಿ ಯೋಜನೆ, ಸಾಮೂಹಿಕ ನೀರಾವರಿ ಯೋಜನೆ, ಸಾಂಪ್ರದಾಯಿಕ ವೃತ್ತಿಗಳಿಗೆ ಆರ್ಥಿಕ ನೆರವು.

ಅಲೆಮಾರಿ– ಅರೆ ಅಲೆಮಾರಿ ಜನಾಂಗದವರಿಗೆ ಆರ್ಥಿಕ ನೆರವು,  ಸ್ವಯಂ ಉದ್ಯೋಗ ಸಾಲ ಯೋಜನೆ, ರಾಷ್ಟ್ರೀಯ ಹಿಂದುಳಿದ ವರ್ಗಗಳ ಹಣಕಾಸು ಮತ್ತು ಅಭಿವೃದ್ದಿ ನಿಗಮದ ಸಾಲ ಯೋಜನೆಗಳು, ಗಂಗಾ ಕಲ್ಯಾಣ ನೀರಾವರಿ ಸೌಲಭ್ಯ.

ಕಡಿಮೆ ಬಡ್ಡಿದರದಲ್ಲಿ ಶೈಕ್ಷಣಿಕ ಸಾಲ, ಮಹಿಳಾ ಸಮೃದ್ಧಿ ಹಾಗೂ ಮಹಿಳಾ ಸ್ವಯಂ ಸಹಾಯ ಸಂಘಗಳ ಮೂಲಕ ಕಿರು ಸಾಲ ಯೋಜನೆ.
ಈ ಯೋಜನೆಗಳಡಿ ಸಾಲ ಸೌಲಭ್ಯ ಪಡೆಯಲು ಇಚ್ಚಿಸುವವರು ಹಿಂದುಳಿದ ವರ್ಗಗಳ ಪ್ರವರ್ಗ-1, 2ಎ, 3ಎ ಮತ್ತು 3ಬಿಗೆ ಸೇರಿದವರಾಗಿರಬೇಕು.
ರಾಜ್ಯ ಸರ್ಕಾರದ ಯೋಜನೆಗಳಿಗೆ ಕುಟುಂಬದ ವಾರ್ಷಿಕ ವರಮಾನ ಗ್ರಾಮಾಂತರ ಪ್ರದೇಶದವರಿಗೆ ₹40 ಸಾವಿರ ಮತ್ತು ಪಟ್ಟಣ ಪ್ರದೇಶದವರಿಗೆ ₹55 ಸಾವಿರದ ಒಳಗಿರಬೇಕು.

ರಾಷ್ಟ್ರೀಯ ಹಿಂದುಳಿದ ವರ್ಗಗಳ ಹಣಕಾಸು ಮತ್ತು ಅಭಿವೃದ್ಧಿ ನಿಗಮದ ಯೋಜನೆಗಳಿಗೆ ಅರ್ಜಿದಾರರ ಮತ್ತು ಅವರ ಕುಟುಂಬದ ವಾರ್ಷಿಕ ವರಮಾನ ಗ್ರಾಮಾಂತರ ಪ್ರದೇಶದವರಿಗೆ ₹95 ಸಾವಿರ ಮತ್ತು ಪಟ್ಟಣ ಪ್ರದೇಶದವರಿಗೆ ₹1.20 ಲಕ್ಷದ ಒಳಗಿರಬೇಕು.

ಅರ್ಜಿ ನಮೂನೆಗಳು ನಿಗಮದ ಜಿಲ್ಲಾ ವ್ಯವಸ್ಥಾಪಕರ ಕಚೇರಿ, ಬೆಂಗಳೂರು ಗ್ರಾಮಾಂತರ ಜಿಲ್ಲೆ, ನಂ.123/1037, 1ನೇ ಮಹಡಿ, 20ನೇ ಮುಖ್ಯರಸ್ತೆ, 5ನೇ ಬ್ಲಾಕ್‌, ವೆಸ್ಟ್ ಆಫ್ ಕಾರ್ಡ್ ರಸ್ತೆ, ರಾಜಾಜಿನಗರ, ಬೆಂಗಳೂರು ಅಥವಾ ಆಯಾ ತಾಲ್ಲೂಕಿನ ಹಿಂದುಳಿದ ವರ್ಗಗಳ ಕಲ್ಯಾಣ ವಿಸ್ತಾರಣಾಧಿಕಾರಿಗಳ ಕಚೇರಿಯಲ್ಲಿ ದೊರೆಯುತ್ತವೆ. ಅರ್ಜಿಗಳನ್ನು ಮೇ 25ರೊಳಗೆ ಪಡೆದು, ಭರ್ತಿ ಮಾಡಿ ಜೂನ್ 16 ರೊಳಗೆ ಸಲ್ಲಿಸಬೇಕು. ಮಾಹಿತಿಗೆ: 080–23156007.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.