ADVERTISEMENT

ಸೇವೆ ಕಾಯಂಗೆ ಒತ್ತಾಯಿಸಿ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 20 ನವೆಂಬರ್ 2014, 19:43 IST
Last Updated 20 ನವೆಂಬರ್ 2014, 19:43 IST
ಬೆಂಗಳೂರು ನಗರ ಜಿಲ್ಲೆಯ ಗ್ರಾಮ ಪಂಚಾಯಿತಿಗಳಲ್ಲಿ ಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುತ್ತಿರುವ ನೌಕರರನ್ನು ಕಾಯಂಗೊಳಿಸಬೇಕು ಎಂದು ಒತ್ತಾಯಿಸಿ ಗ್ರಾಮ ಪಂಚಾಯಿತಿ ನೌಕರರ ಸಂಘದ ಸದಸ್ಯರು ನಗರ ಜಿಲ್ಲಾ ಪಂಚಾಯಿತಿ ಕಚೇರಿ ಎದುರು ಗುರುವಾರ ಪ್ರತಿಭಟನೆ ನಡೆಸಿದರು                                                –ಪ್ರಜಾವಾಣಿ ಚಿತ್ರ
ಬೆಂಗಳೂರು ನಗರ ಜಿಲ್ಲೆಯ ಗ್ರಾಮ ಪಂಚಾಯಿತಿಗಳಲ್ಲಿ ಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುತ್ತಿರುವ ನೌಕರರನ್ನು ಕಾಯಂಗೊಳಿಸಬೇಕು ಎಂದು ಒತ್ತಾಯಿಸಿ ಗ್ರಾಮ ಪಂಚಾಯಿತಿ ನೌಕರರ ಸಂಘದ ಸದಸ್ಯರು ನಗರ ಜಿಲ್ಲಾ ಪಂಚಾಯಿತಿ ಕಚೇರಿ ಎದುರು ಗುರುವಾರ ಪ್ರತಿಭಟನೆ ನಡೆಸಿದರು –ಪ್ರಜಾವಾಣಿ ಚಿತ್ರ   

ಬೆಂಗಳೂರು: ಬೆಂಗಳೂರು ನಗರ ಜಿಲ್ಲೆಯ ಗ್ರಾಮ ಪಂಚಾಯಿತಿಗಳಲ್ಲಿ ಗುತ್ತಿಗೆ ಆಧಾರದಲ್ಲಿ ಕೆಲಸ ಮಾಡು ತ್ತಿರುವ ನೌಕರರನ್ನು ಕಾಯಂ ಗೊಳಿಸಬೇಕು ಎಂದು ಒತ್ತಾಯಿಸಿ ಗ್ರಾಮ ಪಂಚಾಯಿತಿ ನೌಕರರ ಸಂಘದ ಸದಸ್ಯರು ನಗರ ಜಿಲ್ಲಾ ಪಂಚಾಯಿತಿ ಕಚೇರಿ ಎದುರು ಗುರುವಾರ ಪ್ರತಿಭಟನೆ ನಡೆಸಿದರು.

ಈ ವೇಳೆ ಮಾತನಾಡಿದ ಸಂಘದ ಅಧ್ಯಕ್ಷ ಗೋಪಾಲಕೃಷ್ಣ, ‘ನಗರ ಜಿಲ್ಲೆಯಲ್ಲಿ 86 ಗ್ರಾಮ ಪಂಚಾಯಿತಿ ಗಳಿವೆ ಎಂದರು.
ಅದರಲ್ಲಿ 2,100 ಮಂದಿ ನೌಕರರು 15 ವರ್ಷಗಳಿಂದ  ಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುತ್ತಿದ್ದಾರೆ. ಅವರನ್ನು ಕೂಡಲೇ ಕಾಯಂ ಗೊಳಿಸಬೇಕು’ ಎಂದು ಒತ್ತಾಯಿಸಿದರು.

ರಾಜ್ಯ ಸರ್ಕಾರವು 2011ರಲ್ಲಿ ಈ ನೌಕರರಿಗೆ ₨ 7 ಸಾವಿರ ಕನಿಷ್ಠ ವೇತನ ನೀಡಬೇಕು ಎಂದು ಆದೇಶ ನೀಡಿದೆ ಎಂದು ತಿಳಿಸಿದರು.
ಆದರೆ, ಅದನ್ನು ಜಾರಿಗೊಳಿಸಿಲ್ಲ. ಸದ್ಯ ನೌಕರರಿಗೆ ಮಾಸಿಕ  ₨ 1,500 ವೇತನ ನೀಡಲಾಗುತ್ತಿದೆ. ಆದರೆ ಅದನ್ನು ಸರಿಯಾದ ಸಮಯಕ್ಕೆ ನೀಡುತ್ತಿಲ್ಲ ಎಂದು ಅವರು ಈ ಸಂದರ್ಭದಲ್ಲಿ ದೂರಿದರು.

ನೌಕರರನ್ನು ಕೂಡಲೇ ಕಾಯಂ ಗೊಳಿಸಬೇಕು ಮತ್ತು  ಅವರಿಗೆ ಕನಿಷ್ಠ ವೇತನ ನೀಡಬೇಕು ಎಂದು ಅವರು ಈ ಸಂದರ್ಭದಲ್ಲಿ ಒತ್ತಾಯಿಸಿದರು. ಇಲ್ಲದಿದ್ದರೆ ದೊಡ್ಡಮಟ್ಟದಲ್ಲಿ ಹೋರಾಟ ಹಮ್ಮಿಕೊಳ್ಳಲಾಗುವುದು ಎಂದು ಅವರು ಈ ಸಂದರ್ಭದಲ್ಲಿ ಎಚ್ಚರಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.