ADVERTISEMENT

ಸೌರಶಕ್ತಿ ಸಂಶೋಧನಾ ಕೇಂದ್ರ ಶೀಘ್ರ ಕಾರ್ಯಾರಂಭ

​ಪ್ರಜಾವಾಣಿ ವಾರ್ತೆ
Published 4 ಅಕ್ಟೋಬರ್ 2015, 19:38 IST
Last Updated 4 ಅಕ್ಟೋಬರ್ 2015, 19:38 IST

ಬೆಂಗಳೂರು: ಚಿತ್ರದುರ್ಗ ಜಿಲ್ಲೆ ಚಳ್ಳಕೆರೆಯಲ್ಲಿರುವ ಭಾರತೀಯ ವಿಜ್ಞಾನ ಸಂಸ್ಥೆಯ (ಐಐಎಸ್‌ಸಿ) ಕ್ಯಾಂಪಸ್‌ನಲ್ಲಿ  ಸೌರ ಉಷ್ಣ ಸ್ಥಾವರ ಮತ್ತು ಸೌರಶಕ್ತಿ ಸಂಶೋಧನಾ ಕೇಂದ್ರದ ನಿರ್ಮಾಣ ಕಾಮಗಾರಿ ಬಹುತೇಕ ಪೂರ್ಣಗೊಂಡಿದ್ದು, ಶೀಘ್ರ ಕಾರ್ಯಾರಂಭ ಮಾಡಲಿವೆ.

ಕ್ಯಾಂಪಸ್‌ನಲ್ಲಿ ಹವಾಮಾನ ಸಂಶೋಧನಾ ಪ್ರಯೋಗಾಲಯದ ನಿರ್ಮಾಣದ ಕಾಮಗಾರಿ ಸಹ ನಡೆಯುತ್ತಿದೆ. ಇದರಿಂದ ರೈತರಿಗೆ ಹೆಚ್ಚಿನ ಅನುಕೂಲಾಗಲಿದೆ ಎಂದು ಚಳ್ಳಕೆರೆ ಕ್ಯಾಂಪಸ್‌ನ ಉಸ್ತುವಾರಿ ಪ್ರೊ.ಬಿ.ಎನ್‌.ರಘುನಂದನ್‌ ಅವರು ಹೇಳಿದರು.

ಸಂಸ್ಥೆಯ ವತಿಯಿಂದ ಕ್ಯಾಂಪಸ್‌ನಲ್ಲಿ ಮಳೆ ನೀರು ಸಂಗ್ರಹಕ್ಕಾಗಿ ಎರಡು ಚೆಕ್‌ಡ್ಯಾಂಗಳನ್ನು ನಿರ್ಮಿಸಲಾಗುತ್ತಿದೆ. ಇದರಿಂದ ಕ್ಯಾಂಪಸ್‌ನ ಸುತ್ತಮುತ್ತ ಅಂತರ್ಜಲ ಮಟ್ಟ ಹೆಚ್ಚಲಿದೆ ಎಂದರು. ಪ್ರತಿಭಾ ಆಭಿವೃದ್ಧಿ ಕೆಂದ್ರದ (ಟಿಡಿಸಿ) ಸಹಯೋಗದಲ್ಲಿ ಶಾಲೆ, ಕಾಲೇಜು ಮತ್ತು  ವಿಶ್ವವಿದ್ಯಾಲಯದ ವಿಜ್ಞಾನ ಶಿಕ್ಷಕರಿಗೆ ತರಬೇತಿ ನೀಡುವ ಯೋಜನೆಯನ್ನು ಹಮ್ಮಿಕೊಳ್ಳಲಾಗಿದೆ. ಈ ಯೋಜನೆ ಮೂಲಕ 2 ಸಾವಿರ ವಿಜ್ಞಾನ ಶಿಕ್ಷಕರಿಗೆ ತರಬೇತಿ ನೀಡುವ ಗುರಿ ಹೊಂದಲಾಗಿದೆ ಎಂದು ಮಾಹಿತಿ ನೀಡಿದರು.

ತರಬೇತಿಯಲ್ಲಿ ಪ್ರೌಢಶಾಲೆಯ ವಿಜ್ಞಾನ ಶಿಕ್ಷಕರಿಗೆ ಹೆಚ್ಚಿನ ಆದ್ಯತೆ ನೀಡಲಾಗುತ್ತಿದೆ. ಪ್ರೌಢಶಾಲಾ ಹಂತದಲ್ಲಿ ವಿದ್ಯಾರ್ಥಿಗಳಿಗೆ ಉತ್ತಮ ವಿಜ್ಞಾನ ಶಿಕ್ಷಣ ನೀಡಿದರೆ ಅವರ ಮುಂದಿನ ಅಧ್ಯಯನಕ್ಕೆ ಹೆಚ್ಚಿನ ಸಹಕಾರಿಯಾಗಲಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.