ADVERTISEMENT

‘ಸ್ಪರ್ಧಾತ್ಮಕ ಪರೀಕ್ಷೆಗೆ ಗ್ರಂಥಾಲಯ ಸಹಕಾರಿ’

​ಪ್ರಜಾವಾಣಿ ವಾರ್ತೆ
Published 18 ಮೇ 2017, 20:11 IST
Last Updated 18 ಮೇ 2017, 20:11 IST
ಬಿಬಿಎಂಪಿ ನಿರ್ಮಿಸಿರುವ ಗ್ರಂಥಾಲಯ ಕಟ್ಟಡದ ಪತ್ರವನ್ನು ಅರವಿಂದ ಲಿಂಬಾವಳಿ ಅವರು ಗ್ರಂಥಾಲಯ ಇಲಾಖೆಗೆ ಹಸ್ತಾಂತರಿಸಿದರು
ಬಿಬಿಎಂಪಿ ನಿರ್ಮಿಸಿರುವ ಗ್ರಂಥಾಲಯ ಕಟ್ಟಡದ ಪತ್ರವನ್ನು ಅರವಿಂದ ಲಿಂಬಾವಳಿ ಅವರು ಗ್ರಂಥಾಲಯ ಇಲಾಖೆಗೆ ಹಸ್ತಾಂತರಿಸಿದರು   

ಬೆಂಗಳೂರು: ‘ಗ್ರಂಥಾಲಯಗಳನ್ನು ಡಿಜಿಟಲೀಕರಣ ಮಾಡುವುದರಿಂದ ಜನರಲ್ಲಿ ಓದುವ ಹವ್ಯಾಸ ಹೆಚ್ಚಾಗುತ್ತದೆ’ ಎಂದು ಶಾಸಕ ಅರವಿಂದ ಲಿಂಬಾವಳಿ ಅಭಿಪ್ರಾಯಪಟ್ಟರು.

ಮಹದೇವಪುರ ಕ್ಷೇತ್ರದ ತೂಬರಹಳ್ಳಿ ಬಳಿ ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ನಿರ್ಮಿಸಿರುವ ಗ್ರಂಥಾಲಯ ಕಟ್ಟಡವನ್ನು ಲೋಕಾರ್ಪಣೆಗೊಳಿಸಿ ಅವರು ಮಾತನಾಡಿದರು.

‘ಪಾಲಿಕೆಯಿಂದ ₹ 3.29 ಕೋಟಿ ವೆಚ್ಚದಲ್ಲಿ ನಿರ್ಮಿಸಿರುವ ಈ ಗ್ರಂಥಾಲಯಕ್ಕೆ ಡಿಜಿಟಲ್‌ ವ್ಯವಸ್ಥೆ  ಅಳವಡಿಸಿರುವುದು ಅನೇಕರಿಗೆ  ಅನುವಾಗಲಿದೆ. ಅಲ್ಲದೆ, ಯುವಕರನ್ನು ಸೆಳೆಯಲು ಇದು ಸಹಾಯವಾಗಲಿದೆ. ಮತ್ತಷ್ಟು ಗ್ರಂಥಾಲಯಗಳನ್ನು ಇದೇ ಮಾದರಿಯಲ್ಲಿ ಅಭಿವೃದ್ಧಿಗೊಳಿಸಬೇಕು’ ಎಂದು ಹೇಳಿದರು.

ADVERTISEMENT

‘ಈ ಗ್ರಂಥಾಲಯಕ್ಕೆ ಡಾ. ಬಿ.ಆರ್. ಅಂಬೇಡ್ಕರ್ ಅವರ ಹೆಸರು ಇಡಲು ನಿರ್ಧರಿಸಲಾಗಿದೆ. ಸ್ಪರ್ಧಾತ್ಮಕ ಪರೀಕ್ಷೆಗಳ ಅಭ್ಯಾಸಕ್ಕೆ ಅಗತ್ಯವಿರುವ ಪುಸ್ತಕಗಳೂ ಇಲ್ಲಿ ಲಭ್ಯವಿವೆ. ಮಕ್ಕಳಿಗೆ ಪ್ರತ್ಯೇಕ  ವಿಭಾಗ ಮಾಡಿ ಕಥೆ ಮತ್ತು ಸಾಮಾನ್ಯ ಜ್ಞಾನ ವೃದ್ಧಿಗೆ ಅಗತ್ಯವಿರುವ ಪುಸ್ತಕಗಳನ್ನು ಇರಿಸಲು ಅಧಿಕಾರಿಗಳು ಚಿಂತಿಸಿದ್ದಾರೆ’ ಎಂದು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.