ADVERTISEMENT

‘ಸ್ವಂತ ಖರ್ಚಿನಲ್ಲಿ ಶಾಲಾ ಮೆಟ್ಟಿಲು ನಿರ್ಮಿಸಿ’

​ಪ್ರಜಾವಾಣಿ ವಾರ್ತೆ
Published 23 ಸೆಪ್ಟೆಂಬರ್ 2017, 20:03 IST
Last Updated 23 ಸೆಪ್ಟೆಂಬರ್ 2017, 20:03 IST

ಬೆಂಗಳೂರು: ಕೋರ್ಟ್‌ ಆದೇಶ ಪಾಲಿಸದ ಮೂವರು ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಅಧಿಕಾರಿಗಳು ಸ್ವಂತ ಖರ್ಚಿನಲ್ಲಿ ಶಾಲಾ ಕಟ್ಟಡದ ಮೆಟ್ಟಿಲು ನಿರ್ಮಿಸಿಕೊಡುವಂತೆ ಹೈಕೋರ್ಟ್‌ ಆದೇಶಿಸಿದೆ.

ರಸ್ತೆ ವಿಸ್ತರಣೆಗಾಗಿ ಮಡಿವಾಳ ದಲ್ಲಿರುವ ಖಾಲ್ಸಾ ಪಬ್ಲಿಕ್ ಶಾಲೆಯ ಮೆಟ್ಟಿಲುಗಳನ್ನು ತೆರವುಗೊಳಿಸಲಾಗಿತ್ತು. ತೆರವುಕ್ರಮ ಪ್ರಶ್ನಿಸಿ ಸಂಬಂಧಿಸಿದ ಶಾಲಾ ಆಡಳಿತ ಮಂಡಳಿ ಹೈಕೋರ್ಟ್ ಮೆಟ್ಟಿಲೇರಿತ್ತು. ಕಟ್ಟಡದ ಮೆಟ್ಟಿಲುಗಳನ್ನು ತೆರವುಗೊಳಿಸಿರುವುದರಿಂದ ವಿದ್ಯಾರ್ಥಿಗಳಿಗೆ ತೊಂದರೆ ಆಗಿದೆ ಎಂದು ದೂರ
ಲಾಗಿತ್ತು. ಆಗ ಕೋರ್ಟ್‌, ಶಾಲೆಗೆ ಕಬ್ಬಿಣದ ಮೆಟ್ಟಿಲುಗಳನ್ನು ನಿರ್ಮಿಸಿಕೊಡುವಂತೆ ನಿರ್ದೇಶಿಸಿತ್ತು.

ಆದರೆ, ಈ ಆದೇಶ ಪಾಲನೆ ಮಾಡಿಲ್ಲ ಎಂಬ ಕಾರಣಕ್ಕೆ ಸಂಬಂಧಿಸಿದ ಬಿಬಿಎಂಪಿ ಅಧಿಕಾರಿಗಳಾದ ಕಾರ್ಯನಿರ್ವಾಹಕ ಎಂಜಿನಿಯರ್‌ ಪ್ರವೀಣ್‌ ಲಿಂಗಯ್ಯ, ಸಹಾಯಕ ಕಾರ್ಯಪಾಲಕ ಎಂಜಿನಿಯರ್ ಎಚ್‌.ಸಿ.ರಾಜಶೇಖರ ಹಾಗೂ ಸಹಾಯಕ ಎಂಜಿನಿಯರ್ ಎಚ್‌.ಎಂ. ಗೋಪಾಲ ರೆಡ್ಡಿ ವಿರುದ್ಧ ನ್ಯಾಯಾಂಗ ನಿಂದನೆ ಪ್ರಕರಣ ದಾಖಲಿಸಲಾಗಿತ್ತು.

ADVERTISEMENT

ಇತ್ತೀಚೆಗೆ ಪ್ರಕರಣವನ್ನು ವಿಲೇವಾರಿ ಮಾಡಿರುವ ನ್ಯಾಯ ಮೂರ್ತಿ ವಿನೀತ್ ಕೊಠಾರಿ ಅವರಿದ್ದ ಏಕ ಸದಸ್ಯ ನ್ಯಾಯ ಪೀಠ ‘ಮೂವರು ಅಧಿಕಾರಿಗಳು
ಶಾಲೆಗೆ ಕಬ್ಬಿಣದ ಮೆಟ್ಟಿಲುಗಳನ್ನು ತಮ್ಮ ಸ್ವಂತ ಖರ್ಚಿನಲ್ಲಿ ಪುನರ್ ನಿರ್ಮಿಸಿಕೊಡಬೇಕು. ತೆರವುಗೊಳಿಸಲಾರುವ ಶಾಲಾ ಕಟ್ಟಡದ ಬಾಗಿಲು ಮತ್ತು ಕಿಟಕಿ ಗಳನ್ನೂ ಪುನಃ ಶಾಲೆಯ ಸುಪರ್ದಿಗೆ ಒಪ್ಪಿಸಬೇಕು’ ಎಂದು ಹೈಕೋರ್ಟ್‌ ಆದೇಶಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.