ADVERTISEMENT

‘ಈ ವರ್ಷ 1 ಲಕ್ಷ ನಿವೇಶನ ಹಂಚಿಕೆ’

​ಪ್ರಜಾವಾಣಿ ವಾರ್ತೆ
Published 24 ಜುಲೈ 2014, 20:07 IST
Last Updated 24 ಜುಲೈ 2014, 20:07 IST

ಬೆಂಗಳೂರು: ರಾಜ್ಯದ ನಗರಾಭಿವೃದ್ಧಿ ಪ್ರಾಧಿಕಾರಗಳ ಮೂಲಕ ಈ ವರ್ಷ ಒಂದು ಲಕ್ಷ ನಿವೇಶನ ಹಂಚಿಕೆ ಮಾಡಲಾಗುವುದು ಎಂದು ನಗರಾಭಿವೃದ್ಧಿ ಸಚಿವ ವಿನಯಕುಮಾರ್‌ ಸೊರಕೆ ತಿಳಿಸಿದರು.

ವಿಧಾನ ಪರಿಷತ್‌ನಲ್ಲಿ ಗುರುವಾರ ಪ್ರಶ್ನೋತ್ತರ ಅವಧಿಯಲ್ಲಿ ಬಿಜೆಪಿಯ ಅರುಣ್‌ ಶಹಾಪುರ ಅವರ ಪ್ರಶ್ನೆಗೆ ಉತ್ತರ ನೀಡಿದ ಅವರು, ‘ಕೆಲವು ಕಡೆಗಳಲ್ಲಿ ಪ್ರಾಧಿಕಾರದ ಅಧಿಕಾರಿಗಳು ರಿಯಲ್‌ ಎಸ್ಟೇಟ್‌ ಏಜೆಂಟ್‌ಗಳಿಗೆ ಸಹಕರಿಸುತ್ತಿದ್ದಾರೆ ಎಂಬ ಮಾಹಿತಿ ಲಭಿಸಿದೆ. ಇದಕ್ಕೆ ಕಡಿವಾಣ ಹಾಕಲಾಗುವುದು’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.