ADVERTISEMENT

‘ನಗರದಲ್ಲಿ ಪೊಲೀಸ್ ಠಾಣೆ, ಸಿಬ್ಬಂದಿ ಕೊರತೆ’

​ಪ್ರಜಾವಾಣಿ ವಾರ್ತೆ
Published 30 ನವೆಂಬರ್ 2015, 20:12 IST
Last Updated 30 ನವೆಂಬರ್ 2015, 20:12 IST

ಬೆಂಗಳೂರು: ‘ಬೆಂಗಳೂರು ಮಹಾನಗರದಲ್ಲಿ ಪೊಲೀಸ್ ಠಾಣೆಗಳ ಸಂಖ್ಯೆ ಮತ್ತು ಅವುಗಳಲ್ಲಿನ ಸಿಬ್ಬಂದಿ ಕಡಿಮೆ ಇದ್ದಾರೆ’ ಎಂದು ಹೈಕೋರ್ಟ್ ಅಸಮಾಧಾನ ವ್ಯಕ್ತಪಡಿಸಿದೆ.

ಕ್ರಿಮಿನಲ್ ಪ್ರಕರಣವೊಂದರ ವಿಚಾರಣೆ ವೇಳೆ ಸೋಮವಾರ ನ್ಯಾಯಮೂರ್ತಿ ಎ.ವಿ. ಚಂದ್ರಶೇಖರ್‌ ಅವರು, ಈ ಕುರಿತಂತೆ ಸೂಕ್ತ ಕ್ರಮ ಕೈಗೊಳ್ಳಲು ಸರ್ಕಾರಕ್ಕೆ ವಿವರಿಸಿ ಎಂದು ರಾಜ್ಯದ ವಿಶೇಷ ಪಬ್ಲಿಕ್‌ ಪ್ರಾಸಿಕ್ಯೂಟರ್  ಪಿ.ಎಂ.ನವಾಜ್‌ ಅವರಿಗೆ ಮೌಖಿಕವಾಗಿ  ಸೂಚಿಸಿದರು.

‘ಕೆಲವೊಂದು ಠಾಣೆಗಳಲ್ಲಿ 700ಕ್ಕೂ ಪ್ರಕರಣಗಳು ಇತ್ಯರ್ಥವಾಗದೆ ಬಾಕಿ ಉಳಿದಿವೆ. ಇವುಗಳ ತನಿಖೆ ನಡೆಸಲು ಅಗತ್ಯ ಪೊಲೀಸ್ ಸಿಬ್ಬಂದಿಯ ಕೊರತೆ ಬಹುವಾಗಿ ಕಾಡುತ್ತಿದೆ’ ಎಂದು ನ್ಯಾಯಮೂರ್ತಿಗಳು ಕಳವಳ ವ್ಯಕ್ತಪಡಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.